ಕರ್ನಾಟಕ

karnataka

ETV Bharat / state

ಬೆಡ್, ಆಕ್ಸಿಜನ್ ಕೊರತೆ ಉಂಟಾಗದಂತೆ ಕ್ರಮ ವಹಿಸಿ: ಬೆಳಗಾವಿ ಜಿಲ್ಲಾಡಳಿತಕ್ಕೆ ಸಚಿವ ಕಾರಜೋಳ ಆದೇಶ - ಬೆಡ್, ಆಕ್ಸಿಜನ್ ಕೊರತೆ

ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಲಭ್ಯವಿರುವ ಬೆಡ್​ಗಳ ಮಾಹಿತಿಯನ್ನು ಪ್ರತಿದಿನ ವೆಬ್‌ಸೈಟ್‌ ಮೂಲಕ ಜನರಿಗೆ ನೀಡಬೇಕು. ಆಕ್ಸಿಜನ್, ರೆಮ್​ಡಿಸಿವಿರ್ ಮತ್ತಿತರ ಔಷಧೋಪಕರಣಗಳ ಕೊರತೆ ಉಂಟಾಗದಂತೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಡಿಸಿಎಂ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಆದೇಶಿಸಿದರು.

ಬೆಳಗಾವಿ ಜಿಲ್ಲಾಡಳಿತಕ್ಕೆ ಸಚಿವ ಕಾರಜೋಳ ಆದೇಶ
ಬೆಳಗಾವಿ ಜಿಲ್ಲಾಡಳಿತಕ್ಕೆ ಸಚಿವ ಕಾರಜೋಳ ಆದೇಶ

By

Published : May 4, 2021, 4:31 PM IST

Updated : May 4, 2021, 5:05 PM IST

ಬೆಳಗಾವಿ:ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಲಭ್ಯವಿರುವ ಬೆಡ್​ಗಳ ಮಾಹಿತಿಯನ್ನು ಪ್ರತಿದಿನ ವೆಬ್‌ಸೈಟ್‌ ಮೂಲಕ ಜನರಿಗೆ ನೀಡಬೇಕು. ಆಕ್ಸಿಜನ್, ರೆಮ್​ಡಿಸಿವಿರ್ ಮತ್ತಿತರ ಔಷಧೋಪಕರಣಗಳ ಕೊರತೆ ಉಂಟಾಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಮತ್ತು ಅಗತ್ಯ ಚಿಕಿತ್ಸೆ ಒದಗಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲ ಹಿರಿಯ ಅಧಿಕಾರಿಗಳ ಜತೆ ನಡೆದ ವರ್ಚುವಲ್​ ಸಭೆಯಲ್ಲಿ ಮಾತನಾಡಿದ ಅವರು, ಸಂಕಷ್ಟದ ಪರಿಸ್ಥಿತಿಯಲ್ಲಿ ಜನರ ಆರೋಗ್ಯದ ಸಮಸ್ಯೆಗಳಿಗೆ ಸ್ಪಂದಿಸಲು ಎಲ್ಲ ಅಧಿಕಾರಿಗಳು ಸಮನ್ವಯತೆಯೊಂದಿಗೆ 24 ಗಂಟೆಯೂ ಕೆಲಸ ಮಾಡಲು ಮುಂದಾಗಬೇಕು ಎಂದರು.

ರೆಮ್ಡಿಸಿವಿರ್ ಲಭ್ಯತೆ ಬಗ್ಗೆ ನಿಗಾ:ಕೋವಿಡ್ ಸೋಂಕಿತರ ಚಿಕಿತ್ಸೆಯಲ್ಲಿ ಆಕ್ಸಿಜನ್ ಕೊರತೆಯ ಬಗ್ಗೆ ಸಾಕಷ್ಟು ವರದಿಗಳು ಬರುತ್ತಿವೆ. ಆದ್ದರಿಂದ ಜಿಲ್ಲೆಯಲ್ಲಿ ಲಭ್ಯವಿರುವ ಆಕ್ಸಿಜನ್ ದಾಸ್ತಾನು, ದೈನಂದಿನ ಬಳಕೆ ಹಾಗೂ ತುರ್ತು ಸಂದರ್ಭದಲ್ಲಿ ಪೂರೈಕೆಯ ಮೇಲೆ ನಿರಂತರ ನಿಗಾ ವಹಿಸಬೇಕು. ರೆಮ್ ಡಿಸಿವಿರ್ ಲಭ್ಯತೆ ಬಗ್ಗೆ ನಿಗಾ ವಹಿಸುವುದರ ಜತೆಗೆ ಅದು ಕಾಳಸಂತೆಯಲ್ಲಿ ಮಾರಾಟವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಹೆಚ್ಚಿನ ದರಕ್ಕೆ ಮಾರಾಟ ಮಾಡುವ ಆಸ್ಪತ್ರೆಗಳಿಗೆ ನೋಟಿಸ್ ನೀಡಬೇಕು. ಆದರೆ ಸೇವಾಶುಲ್ಕ ಮಾತ್ರ ಪಡೆಯಲು ಅವಕಾಶವನ್ನು ಕಲ್ಪಿಸಬೇಕು ಎಂದು ಹೇಳಿದರು.

ಬೆಳಗಾವಿ ಜಿಲ್ಲಾಡಳಿತಕ್ಕೆ ಸಚಿವ ಕಾರಜೋಳ ಆದೇಶ

ಅಕ್ಕಪಕ್ಕದ ಜಿಲ್ಲೆಗಳ ಅಧಿಕಾರಿಗಳ ಜತೆ ಸಮನ್ವಯತೆ ಸಾಧಿಸಿ :ಜಿಲ್ಲೆಯಲ್ಲಿ ಲಭ್ಯವಿರುವ ವೆಂಟಿಲೇಟರ್ ಸೌಲಭ್ಯ ಸಮರ್ಪಕ ಬಳಕೆಗೆ‌ ಅಗತ್ಯವಿರುವ ತಂತ್ರಜ್ಞರನ್ನು ನೇಮಿಸಿಕೊಳ್ಳಬೇಕು. ಅಕ್ಕಪಕ್ಕದ ಜಿಲ್ಲೆಗಳ ಅಧಿಕಾರಿಗಳ ಜತೆ ಸಮನ್ವಯ ಸಾಧಿಸಿಕೊಂಡು ಆಕ್ಸಿಜನ್ ಮತ್ತಿತರ ಸೌಲಭ್ಯಗಳನ್ನು ಸಂದರ್ಭಕ್ಕೆ ತಕ್ಕಂತೆ ಪರಸ್ಪರ ವಿನಿಮಯ ಮಾಡಿಕೊಳ್ಳಬೇಕು ಎಂದು ಸಚಿವರು ಸೂಚಿಸಿದರು.

ವಲಸೆ ಕಾರ್ಮಿಕರಿಗೆ ಉದ್ಯೋಗ ನೀಡಿ:ಕೋವಿಡ್ ಸೋಂಕು ಹರಡುತ್ತಿರುವುದರಿಂದ ವಲಸೆ ಕಾರ್ಮಿಕರು ಜಿಲ್ಲೆಗೆ ಹಿಂದಿರುಗುತ್ತಿದ್ದಾರೆ. ಹೀಗೆ ಹುಟ್ಟೂರಿಗೆ ಬರುವ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕಡ್ಡಾಯವಾಗಿ ಉದ್ಯೋಗ ಕಲ್ಪಿಸಬೇಕು ಎಂದು ಜಿಲ್ಲಾ ಪಂಚಾಯತ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಮಳೆನೀರು ಕೊಯ್ಲು, ಬದು ನಿರ್ಮಾಣ ಮೂಲಕ ಉದ್ಯೋಗ ಕಲ್ಪಿಸಬೇಕು. ಒಂದು ವೇಳೆ ಸರ್ಕಾರಿ ಜಾಗೆಯಲ್ಲಿ ಕೆಲಸ ಸೃಷ್ಟಿಸುವುದು ಸಾಧ್ಯವಿಲ್ಲದಿದ್ದರೆ ರೈತರ ಜಮೀನಿನಲ್ಲಿ ಉದ್ಯೋಗ ಸೃಷ್ಟಿಸಲು ಸಲಹೆ ನೀಡಿದರು.

ಕಡ್ಡಾಯವಾಗಿ ಲಸಿಕೆ ನೀಡಲು ನಿರ್ದೇಶನ:ಮಾಧ್ಯಮ‌ ಪ್ರತಿನಿಧಿಗಳು, ಮನೆ ಮನೆಗೆ ಸಿಲಿಂಡರ್ ಪೂರೈಸುವವರಿಗೆ, ಕ್ಷೌರಿಕರು, ಅಗಸ ವೃತ್ತಿಯಲ್ಲಿ ತೊಡಗಿರುವವರಿಗೆ ಕೋವಿಡ್ ಲಸಿಕೆಯನ್ನು ಆದ್ಯತೆಯ ಮೇರೆಗೆ ನೀಡಬೇಕು. ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಬೆಡ್, ಆಕ್ಸಿಜನ್, ರೆಮ್​ಡಿಸಿವಿರ್ ಸೇರಿದಂತೆ ಯಾವುದೇ ರೀತಿಯ ಸಮಸ್ಯೆಗಳು ಉಂಟಾಗದಂತೆ‌ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳ ಬಳಿ ಸಾಕಷ್ಟು ಅನುದಾನ ಲಭ್ಯವಿದೆ. ಒಂದು ವೇಳೆ ಹಣಕಾಸು, ಔಷಧೋಪಕರಣಗಳ ಖರೀದಿ ಸೇರಿದಂತೆ ಸರ್ಕಾರದಿಂದ ಯಾವುದೇ ರೀತಿಯ ನೆರವು ಅಗತ್ಯವಿದ್ದರೆ ತಕ್ಷಣವೇ ತಮ್ಮ ಗಮನಕ್ಕೆ ತರಬೇಕು ಎಂದು ಸಚಿವರು ಹೇಳಿದರು.

Last Updated : May 4, 2021, 5:05 PM IST

ABOUT THE AUTHOR

...view details