ಬೆಂಗಳೂರು : ಉಪ ಚುನಾವಣೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಮಹತ್ವದ ವಿಷಯ ಚರ್ಚಿಸಲು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಇಂದು ಸಂಜೆ ಶಾಸಕರ ಸಭೆ ಕರೆದಿದ್ದಾರೆ.
ಇಂದು ಸಂಜೆ ಜೆಡಿಎಸ್ ಶಾಸಕರು, ವಿಧಾನ ಪರಿಷತ್ ಸದಸ್ಯರ ಸಭೆ - JDS MLAs and Parliament Members meeting news
ಇಂದು ಸಂಜೆ 5 ಗಂಟೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷದ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ಸಭೆ ನಡೆಸಲಿದೆ.
HD deve gowdha
ಪಕ್ಷದ ಕಚೇರಿಯಲ್ಲಿ ಇಂದು ಸಂಜೆ 5 ಗಂಟೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ಪಕ್ಷದ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ.
ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಾಗೂ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಸಂಬಂಧ ಸಭೆಯಲ್ಲಿ ನಾಯಕರು ಚರ್ಚೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.