ಕರ್ನಾಟಕ

karnataka

ಕನ್ನಡ ಚಿತ್ರರಂಗಕ್ಕೆ ಮಾದಕದ್ರವ್ಯದ ನಂಟು ನಿಜಕ್ಕೂ ಆಘಾತಕಾರಿ: ದಿನೇಶ್ ಗುಂಡೂರಾವ್

By

Published : Aug 30, 2020, 1:26 PM IST

ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ದಂಧೆ ನಡೆಯುತ್ತಿದೆ ಎಂಬ ಸುದ್ದಿ ಕೇಳಿಬಂದಿರುವುದು ನಿಜಕ್ಕೂ ಆಘಾತಕಾರಿ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಗುಂಡೂರಾವ್
ಗುಂಡೂರಾವ್

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಮಾದಕದ್ರವ್ಯದ ನಂಟು ಇದೆ ಎನ್ನುವ ವಿಚಾರ ನಿಜಕ್ಕೂ ಆಘಾತಕಾರಿ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಮಾದಕ ದ್ರವ್ಯದ ದೊಡ್ಡ ಜಾಲವೇ ಪತ್ತೆಯಾಗಿದೆ. ಡ್ರಗ್ಸ್ ಪೆಡ್ಲರ್‌ಗಳ ಜೊತೆ ಕನ್ನಡ ಚಿತ್ರರಂಗದ ಕೆಲವರ ನಂಟು ಇದೆ ಎಂಬ ಮಾತು ಆಘಾತಕಾರಿ. ಮಾದಕ ವ್ಯಸನಕ್ಕೆ ಅತಿ ಹೆಚ್ಚು ಬಲಿಯಾಗುವುದೇ ಯುವ ಸಮುದಾಯ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮಾದಕ ವಸ್ತು ಜಾಲವನ್ನು ಮಟ್ಟ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಮಾದಕ ದ್ರವ್ಯ ಮಾರಾಟ ಸಂಬಂಧ ಈಗಾಗಲೇ ಕಾಂಗ್ರೆಸ್ ಪಕ್ಷದ ಹಲವು ನಾಯಕರು ಬೇಸರ ವ್ಯಕ್ತಪಡಿಸಿದ್ದು, ಸರ್ಕಾರ ಪರಿಣಾಮಕಾರಿಯಾಗಿ ಇದನ್ನು ನಿಯಂತ್ರಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯುವ ಮೂಲಕ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವಿಶೇಷ ಕಾಳಜಿ ಮೆರೆದಿದ್ದಾರೆ. ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಈ ಡ್ರಗ್ಸ್ ದಂಧೆ ವಿರುದ್ಧ ಧ್ವನಿ ಎತ್ತಿದ್ದು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕನ್ನಡ ಚಿತ್ರರಂಗದ ಜೊತೆ ಮಾದಕ ದ್ರವ್ಯ ವಿಚಾರ ತಳುಕು ಹಾಕಿಕೊಂಡಿದ್ದು ಚಿತ್ರರಂಗದ ಹಲವು ಮುಖಂಡರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರ ಈ ದಂಧೆಯನ್ನು ಮಟ್ಟ ಹಾಕಲು ಗಂಭೀರ ತನಿಖೆ ನಡೆಸಿರುವ ಬೆನ್ನಲ್ಲೇ ಜವಾಬ್ದಾರಿಯುತ ಪ್ರತಿಪಕ್ಷವಾಗಿ ಕಾಂಗ್ರೆಸ್ ಕೂಡ ಈ ವಿಚಾರದಲ್ಲಿ ಸರ್ಕಾರದ ಮೇಲೆ ಒತ್ತಡ ಹೇರುವ ಕಾರ್ಯ ಮಾಡುತ್ತಿದೆ.

ABOUT THE AUTHOR

...view details