ಬೆಂಗಳೂರು: ನಮ್ಮದೇ ನೆಲದಲ್ಲಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪಿಸಲು ರಾಜ್ಯ ಸರ್ಕಾರಕ್ಕೆ ಹಿಂಜರಿಕೆ ಯಾಕೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.
ಟ್ವೀಟ್ ಮೂಲಕ ಪ್ರಶ್ನೆ ಕೇಳಿರುವ ಅವರು, ಬೆಳಗಾವಿ ಜಿಲ್ಲೆಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆಗೆ ನೇರವಾಗಿ ಬೆಂಬಲ ವ್ಯಕ್ತಪಡಿಸಿದ್ದಾರೆ. ನಮ್ಮದೇ ನೆಲದಲ್ಲಿ ಪ್ರತಿಮೆ ಪ್ರತಿಷ್ಠಾಪಿಸಲು ರಾಜ್ಯ ಸರ್ಕಾರ ಹಿಂದೇಟು ಹಾಕಬಾರದು. ಹೀಗೆ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಅಸ್ಮಿತೆ ವಿಚಾರದಲ್ಲಿ ರಾಜಿ ಇಲ್ಲ:
ಕರ್ನಾಟಕದ ಅಸ್ಮಿತೆಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದ ಕಾಂಗ್ರೆಸ್ ಮುಖಂಡ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕರುನಾಡಿನ ಅಸ್ಮಿತೆ ಮತ್ತು ಹೆಮ್ಮೆಯಾಗಿದ್ದಾರೆ. 'ರಾಜ್ಯ ಸರ್ಕಾರ ಬೆಳಗಾವಿಯ ಪೀರನವಾಡಿಯಲ್ಲಿ ರಾಯಣ್ಣ ಪ್ರತಿಮೆಯನ್ನು ಮರು ಪ್ರತಿಷ್ಠಾಪಿಸಲಿ. ನಮ್ಮದೇ ನೆಲದಲ್ಲಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪಿಸಲು ರಾಜ್ಯ ಸರ್ಕಾರಕ್ಕೆ ಹಿಂಜರಿಕೆ ಯಾಕೆ' ಎಂದು ಪ್ರಶ್ನಿಸಿದ್ದಾರೆ.
ಈಗಾಗಲೇ ಕಳೆದ ರಾತ್ರಿ ಬೆಳಗಾವಿಯ ಪೀರನವಾಡಿಯಲ್ಲಿ ರಾಯಣ್ಣನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ. ಇದನ್ನು ಖಂಡಿಸಿ ಮರಾಠಿ ಭಾಷಿಗರು ಪ್ರತಿಭಟನೆಗೆ ಮುಂದಾಗಿದ್ದು, ಉಭಯ ಗುಂಪುಗಳನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಪರಿಸ್ಥಿತಿಯನ್ನು ತಿಳಿಗೊಳಿಸುವ ಪ್ರಯತ್ನ ನಡೆಸಿದ್ದು, ಈ ಮಧ್ಯೆ ಪ್ರತಿಪಕ್ಷದ ನಾಯಕ ದಿನೇಶ್ ಗುಂಡೂರಾವ್ ಸರ್ಕಾರಕ್ಕೆ ಬಿಸಿ ಮುಟ್ಟಿಸುವಂತೆ ಮಾತನಾಡಿದ್ದಾರೆ.