ಮಂಡ್ಯ: ಕಬ್ಬು ಕಡಿಯುವ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಗೂಡ್ಸ್ ಆಟೋವೊಂದು ಪಲ್ಟಿಯಾಗಿ ಎಂಟು ಮಂದಿ ಗಾಯಗೊಂಡ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಹುಂಜನಕೆರೆ ಗ್ರಾಮದ ಬಳಿ ನಡೆದಿದೆ.
ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಆಟೋ ಪಲ್ಟಿ: 8 ಮಂದಿಗೆ ಗಾಯ - ಗೂಡ್ಸ್ ಆಟೋ ಪಲ್ಟಿ
ಮಹದೇವಪುರದಿಂದ ಆರಕೆರೆಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಆಟೋ ಹಳ್ಳಕ್ಕೆ ಉರುಳಿ ಬಿದ್ದಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ.
Accident
ಗಾಯಗೊಂಡ ಕಾರ್ಮಿಕರು ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದ ಗ್ರಾಮದವರಾಗಿದ್ದು, ಎಲ್ಲರಿಗೂ ಮಿಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಹದೇವಪುರದಿಂದ ಆರಕೆರೆಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ವಾಹನ ಹಳ್ಳಕ್ಕೆ ಉರುಳಿ ಬಿದ್ದಿದ್ದೆ.
ಈ ಸಂಬಂಧ ಅರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.