ಧಾರವಾಡ: ಖ್ಯಾತ ಸಾಹಿತ್ಯ ವಿಮರ್ಶಕ ಮತ್ತು ಹಿರಿಯ ಸಾಹಿತಿ ಜಿ.ಎಸ್. ಅಮೂರ (96) ಅವರು ವಯೋಸಹಜ ಕಾಯಿಲೆಯಿಂದ ಧಾರವಾಡದ ಸ್ವಗೃಹದಲ್ಲಿ ಇಂದು ಬೆಳಗ್ಗೆ ಸುಮಾರು 5 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.
ಖ್ಯಾತ ಸಾಹಿತ್ಯ ವಿಮರ್ಶಕ ಜಿ.ಎಸ್. ಅಮೂರ ಇನ್ನಿಲ್ಲ
ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಖ್ಯಾತ ಸಾಹಿತ್ಯ ವಿಮರ್ಶಕ ಮತ್ತು ಹಿರಿಯ ಸಾಹಿತಿ ಜಿ.ಎಸ್. ಅಮೂರ (96) ಅವರು ಇಂದು ನಿವಿಧಿವಶರಾಗಿದ್ದಾರೆ.
ಅಮೂರ
ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅಮೂರ ಅವರು, ಮೂರು ವಾರಗಳ ಹಿಂದೆಯಷ್ಟೇ ನೃಪತುಂಗ ಪ್ರಶಸ್ತಿಗೆ ಭಾಜನರಾಗಿದ್ದರು. ಜೊತೆಗೆ ಇಂಗ್ಲಿಷ್ ಹಾಗೂ ಕನ್ನಡ ಭಾಷೆಯಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಅವರು ಹಲವು ಪ್ರಶಸ್ತಿಗಳನ್ನು ಪಡೆದು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.
ಅಮೂರ ಅವರ ನಿಧನಕ್ಕೆ ಗಣ್ಯರು, ಸಾಹಿತಿಗಳು ಸೇರಿದಂತೆ ಕ.ಸಾ.ಪ ಅಧ್ಯಕ್ಷ ಮನು ಬಳಿಗಾರ್ ಸಂತಾಪ ಸೂಚಿಸಿದ್ದಾರೆ.