ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು,ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಹರಸಾಹಸ ಪಡುತ್ತಿದೆ. ಈ ವೇಳೆ, ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ 28 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹೋಮ್ ಕ್ವಾರಂಟೈನ್ ಉಲ್ಲಂಘನೆ: 28 ಮಂದಿ ವಿರುದ್ಧ ಎಫ್ಐಆರ್ ದಾಖಲು - Kalburgi covid 19 cases
ಕಲಬುರಗಿ ಜಿಲ್ಲೆಯಲ್ಲಿ ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ 28 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
Kalburgi
ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಒಂದು ಸಾವಿರದ ಗಡಿ ದಾಟಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಲೇ ಇದೆ. ಕೊರೊನಾ ವೈರಸ್ಗೆ ಕಡಿವಾಣ ಹಾಕಲು ಜಿಲ್ಲಾಡಳಿತ, ಆರೋಗ್ಯ ಇಲಾಖೆ ಸಾಕಷ್ಟು ಹರಸಾಹಸ ಪಡುತ್ತಿದೆ. ಆದರೂ ಕೂಡ ಕೆಲವರು ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಹೊರಗಡೆ ಓಡಾಡುತ್ತಿರುವ ಪ್ರಕರಣಗಳು ಆಗಾಗ ಬೆಳಕಿಗೆ ಬರುತ್ತಿದ್ದವು.
ಅನೇಕ ಬಾರಿ ಎಚ್ಚರಿಕೆ ನೀಡಿದ್ರೂ ಕೆಲವರು ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡುತಿದ್ದರು. ಇದೀಗ ಜಿಲ್ಲಾಡಳಿತ ಹೋಮ್ ಕ್ವಾರಂಟೈನ್ ಉಲ್ಲಂಘಿಸಿ ಹೊರಗೆ ಓಡಾಡಿರುವ 28 ಜನರ ವಿರುದ್ಧ ಕೇಸ್ ದಾಖಲು ಮಾಡಿ ಖಡಕ್ ಎಚ್ಚರಿಕೆ ನೀಡಿದೆ.