ಕರ್ನಾಟಕ

karnataka

ETV Bharat / state

ಬೆಳಗಾವಿಯ ಸೋಂಕಿತ ಬಾಲಕ ಸೇರಿ ನಾಲ್ವರಿಗಿಲ್ಲ ಪರೀಕ್ಷೆ

ಬೆಳಗಾವಿಯ ನಾಲ್ವರು ವಿದ್ಯಾರ್ಥಿಗಳಿಗೆ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ‌.

By

Published : Jun 24, 2020, 2:03 PM IST

Belagavi
Belagavi

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯ ನಾಲ್ವರು ವಿದ್ಯಾರ್ಥಿಗಳಿಗೆ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ‌.

ಚೆನ್ನೈನಿಂದ ಮರಳಿದ್ದ ಬೆಳಗಾವಿ ತಾಲೂಕಿನ ಕಿತ್ತೂರು ತಾಲೂಕಿನ 16 ವರ್ಷದ ಬಾಲಕನಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಲಾಕ್ ಡೌನ್ ಮುನ್ನವೇ ಈತ ಚೆನ್ನೈನಲ್ಲಿರುವ ಅಕ್ಕನ ಮನೆಗೆ ಹೋಗಿದ್ದನು. ಮರಳಿ ಕಿತ್ತೂರಿಗೆ ಬಂದಿದ್ದ ಬಾಲಕನನ್ನು 14 ದಿನ ಕ್ವಾರಂಟೈನ್ ಮಾಡಲಾಗಿತ್ತು. ಕ್ವಾರಂಟೈನ್ ಅವಧಿ ಮುಗಿದ ಬಳಿಕ ಗ್ರಾಮದಲ್ಲಿ ಸುತ್ತಾಡಿ, ಸಲೂನ್ ಕೂಡ ಮಾಡಿಸಿಕೊಂಡಿದ್ದ. ಅಲ್ಲದೆ ಸ್ನೇಹಿತರ ಜೊತೆಗೂಡಿ ಶಾಲೆಗೆ ಹೋಗಿ ಹಾಲ್ ಟಿಕೆಟ್‌ ಕೂಡ ತಂದಿದ್ದನು.

ಬಳಿಕ ಬಾಲಕನಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇದೀಗ ಬಾಲಕ ಕೋವಿಡ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಾಲಕನ ಜತೆಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಮೂವರು ಬಾಲಕರನ್ನು ಕ್ವಾರಂಟೈನ್ ಮಾಡಲಾಗಿದೆ. ಈ ಕಾರಣಕ್ಕೆ ನಾಲ್ವರು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ.

For All Latest Updates

ABOUT THE AUTHOR

...view details