ಬೆಂಗಳೂರು: ಒಳಮೀಸಲಾತಿ ಸರ್ವರಿಗೂ ಸಮಪಾಲು, ಸಮಬಾಳು ಎಂಬ ಸಂವಿಧಾನಿಕ ಮೂಲ ಧಾತುವೇ ಆಗಿದೆ. ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಾರಿಗೊಳಿಸಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ತುಳಿತಕ್ಕೊಳಗಾದ ಎಲ್ಲಾ ಜಾತಿಗಳಿಗೂ ಮೀಸಲಾತಿಯ ಫಲ ದಕ್ಕಬೇಕು ಎಂಬ ಸುಪ್ರೀಂಕೋರ್ಟಿನ ಆಶಯ ಒಳಮೀಸಲಾತಿಯ ಪರವಾದ ನಿಲುವೇ ಆಗಿದ್ದು, ಅದನ್ನು ಜಾರಿಗೊಳಿಸುವುದು ಸಾಮಾಜಿಕ ನ್ಯಾಯದ ಪರಿಪಾಲನೆಯ ಕರ್ತವ್ಯವಾಗುತ್ತದೆ. ಮೇಲ್ ಜಾತಿಯಲ್ಲಿನ ಬಡವರಿಗೆ ಶೇ.10 ರಷ್ಟು ಮೀಸಲಾತಿಯನ್ನು ಜಾರಿಗೆ ತಂದ ಕೇಂದ್ರದ ಬಿಜೆಪಿ ಸರ್ಕಾರ, ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳಲ್ಲಿನ ಅವಕಾಶ ವಂಚಿತರಿಗೆ ಒಳಮೀಸಲಾತಿ ಜಾರಿಗೆ ತರಬಾರದೇಕೆ? ಎಂದು ಪ್ರಶ್ನಿಸಿದ್ದಾರೆ.