ಹುಬ್ಬಳ್ಳಿ:ಶ್ರಮಿಕ್ ಎಕ್ಸ್ಪ್ರೆಸ್ ರೈಲಿನ ಮೂಲಕ ನಗರದಿಂದ ಪಶ್ಚಿಮ ಬಂಗಾಳಕ್ಕೆ ತೆರಳುತ್ತಿದ್ದ ಪ್ರಯಾಣಿಕರಿಗೆ ಇಂದು ಆರೋಗ್ಯ ತಪಾಸಣೆ ನಡೆಸಿ ಟಿಕೆಟ್ ಹಂಚಿಕೆ ಮಾಡಲಾಯಿತು.
ಹುಬ್ಬಳ್ಳಿಯಿಂದ ಪ.ಬಂಗಾಳಕ್ಕೆ ತೆರಳುತ್ತಿದ್ದ ವಲಸೆ ಕಾರ್ಮಿಕರಿಗೆ ಆರೋಗ್ಯ ತಪಾಸಣೆ - Lock down effect
ನಗರದ ಹೊಸ ಬಸ್ ನಿಲ್ದಾಣದಲ್ಲಿ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ವತಿಯಿಂದ ಬೆಳಗ್ಗೆ 5.30 ರಿಂದಲೇ ಪಶ್ಚಿಮ ಬಂಗಾಳಕ್ಕೆ ಪ್ರಯಾಣಿಸುವ ವಲಸೆ ಕಾರ್ಮಿಕರು ಹಾಗೂ ಪ್ರಯಾಣಿಕರಿಗೆ ರೈಲು ಟಿಕೆಟ್ ಹಂಚಿಕೆ ಮತ್ತು ಆರೋಗ್ಯ ತಪಾಸಣೆ ನಡೆಸಲಾಯಿತು.
ನಗರದ ಹೊಸ ಬಸ್ ನಿಲ್ದಾಣದಲ್ಲಿ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ವತಿಯಿಂದ ಬೆಳಗ್ಗೆ 5.30 ರಿಂದಲೇ ಪಶ್ಚಿಮ ಬಂಗಾಳಕ್ಕೆ ಪ್ರಯಾಣಿಸುವ ವಲಸೆ ಕಾರ್ಮಿಕರು ಹಾಗೂ ಪ್ರಯಾಣಿಕರಿಗೆ ರೈಲು ಟಿಕೆಟ್ ಹಂಚಿಕೆ ಮತ್ತು ಆರೋಗ್ಯ ತಪಾಸಣೆ ನಡೆಸಲಾಯಿತು.
ಪ್ರಯಾಣಿಕರನ್ನು ಹೊಸ ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣಕ್ಕೆ ತಲುಪಿಸಲು ಕೆಎಸ್ಆರ್ ಟಿಸಿ ಬಸ್ ವ್ಯವಸ್ಥೆ ಮಾಡಲಾಗಿತ್ತು.
ಕಂದಾಯ ಇಲಾಖೆ , ಮಹಾನಗರ ಪಾಲಿಕೆ , ಆರೋಗ್ಯ ಇಲಾಖೆ , ಕಾರ್ಮಿಕ ಇಲಾಖೆ , ಕೆಎಸ್ಆರ್ಟಿಸಿ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿ ಕಾರ್ಯದಲ್ಲಿ ಪಾಲ್ಗೊಂಡ ವಲಸೆ ಕಾರ್ಮಿಕರನ್ನು ಸ್ವಗ್ರಾಮದತ್ತ ಕಳುಹಿಸಿದರು.