ಕರ್ನಾಟಕ

karnataka

ETV Bharat / state

ಅಕ್ರಮ ಸಂಬಂಧ ಶಂಕೆ: ಕಬ್ಬಿಣದ ರಾಡ್​​ನಿಂದ ಪತ್ನಿ ತಲೆಗೆ ಹೊಡೆದು ಕೊಲೆಗೈದ ಪತಿ - ದೊಡ್ಡಬಳ್ಳಾಪುರ ಪತ್ನಿ ಕೊಂದ ಪತಿ ನ್ಯೂಸ್

ದೊಡ್ಡಬಳ್ಳಾಪುರ ತಾಲೂಕಿನ ತಳಗವಾರ ಗ್ರಾಮದ ವ್ಯಕ್ತಿಯೊಬ್ಬ ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ಪತ್ನಿಯನ್ನೇ ಕೊಲೆ ಮಾಡಿದ್ದಾನೆ.

ದೊಡ್ಡಬಳ್ಳಾಪುರ
ದೊಡ್ಡಬಳ್ಳಾಪುರ

By

Published : Sep 6, 2020, 2:52 PM IST

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ಪತ್ನಿಯನ್ನು ಪತಿ ಕೊಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತಳಗವಾರ ಗ್ರಾಮದಲ್ಲಿ ನಡೆದಿದೆ.

ದೀಪಿಕಾ (31) ಮೃತ ಗೃಹಿಣಿ. ಕಳೆದ ರಾತ್ರಿ ಮೃತಳ ಗಂಡ ಮಂಜುನಾಥ್ (40) ಆಕೆಯೊಂದಿಗೆ ಅಕ್ರಮ ಸಂಬಂಧದ ವಿಚಾರವಾಗಿ ಜಗಳ ತೆಗೆದಿದ್ದಾನೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಮಂಜುನಾಥ್ ಕೈಗೆ ಸಿಕ್ಕ ಕಬ್ಬಿಣದ ರಾಡಿನಿಂದ ದೀಪಿಕಾ ತಲೆಗೆ ಬಲವಾಗಿ ಹೊಡೆದ ಕಾರಣ ಆಕೆ ಸ್ಥಳದಲ್ಲೇ ಸಾವನಪ್ಪಿದ್ದಾಳೆ ಎನ್ನಲಾಗಿದೆ.

ಸ್ವಂತ ಅಕ್ಕನ ಮಗಳನ್ನು ಮದುವೆಯಾಗಿದ್ದ ಮಂಜುನಾಥ್ ಗೆ 8 ವರ್ಷದ ಗಂಡು ಮಗುವಿದ್ದು, ಸದ್ಯಕ್ಕೆ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details