ಮೈಸೂರು : ಮೆಡಿಕಲ್ ಆಕ್ಸಿಜನ್ ಸಿಲಿಂಡರ್‌ನ ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನ ನಗರದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ನಂಜನಗೂಡು ತಾಲೂಕಿನ ಎಸ್.ಹೊಸಕೋಟೆ ಗ್ರಾಮದ ಮಧುಕುಮಾರ್(37) ಬಂಧಿತ ಆರೋಪಿ. ಕೋವಿಡ್-19 ಸೋಂಕಿತರಿಗೆ ಆಕ್ಸಿಜನ್ ಸಿಲಿಂಡರ್‌ಗಳ ಅವಶ್ಯಕತೆ ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ಆಕ್ಸಿಜನ್ ಸಿಲಿಂಡರ್‌ಗಳು ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು.
ಕಾಳಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್ ಮಾರಾಟಕ್ಕೆ ಯತ್ನಿಸಿದವ ಅಂದರ್ - Oxygen selling
ಆಕ್ಸಿಜನ್ ತುಂಬಿದ್ದ ಒಂದು ಜಂಬು (ಡಿಟೈಪ್)ಮೆಡಿಕಲ್ ಆಕ್ಸಿಜನ್ ಸಿಲಿಂಡರ್ ವಶಪಡಿಸಿಕೊಂಡಿದ್ದು, ಈ ಬಗ್ಗೆ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
ಮೈಸೂರು ನಗರ ಸಿಸಿಬಿ ಪೊಲೀಸರು ಹಾಗೂ ಔಷಧ ನಿಯಂತ್ರಣ ಇಲಾಖೆಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದರು. ಮೇ 3ರ ರಾತ್ರಿ 7ರ ಸಮಯದಲ್ಲಿ ಮೈಸೂರು ನಗರ ಜೆ.ಪಿ.ನಗರದ ಮೈಸೂರು - ನಂಜನಗೂಡು ಮುಖ್ಯ ರಸ್ತೆಯ ಹಾಗೂ ವರ್ತುಲ ರಸ್ತೆಯ ಜಂಕ್ಷನ್ ನಲ್ಲಿರುವ ಪೆಟ್ರೋಲ್ ಬಂಕ್ ಮುಂಭಾಗ ಯಾವುದೇ ದಾಖಲಾತಿಗಳು ಇಲ್ಲದೇ, ಅಕ್ರಮವಾಗಿ ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಆಕ್ಸಿಜನ್ ತುಂಬಿದ್ದ ಜಂಬು (ಡಿ ಟೈಪ್) ಮೆಡಿಕಲ್ ಆಕ್ಸಿಜನ್ ಸಿಲಿಂಡರ್ ವಶಕ್ಕೆ ಪಡೆದು, ಆರೋಪಿಯನ್ನ ಬಂಧಿಸಿದ್ದಾರೆ.
ಆಕ್ಸಿಜನ್ ತುಂಬಿದ್ದ ಒಂದು ಜಂಬು (ಡಿಟೈಪ್)ಮೆಡಿಕಲ್ ಆಕ್ಸಿಜನ್ ಸಿಲಿಂಡರ್ ವಶಪಡಿಸಿಕೊಂಡಿದ್ದು, ಈ ಬಗ್ಗೆ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.