ಬೆಂಗಳೂರು: ಕೋರಮಂಗಲ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನೂತನವಾಗಿ ನಿರ್ಮಿಸಿರುವ 210 ದಶ ಲಕ್ಷ ಲೀಟರ್ ಸಾಮರ್ಥ್ಯದ ಮಧ್ಯಂತರ ತ್ಯಾಜ್ಯ ನೀರು ರೇಚಕ ಸ್ಥಾವರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು.
210 ದಶಲಕ್ಷ ಲೀಟರ್ ಸಾಮರ್ಥ್ಯದ ತ್ಯಾಜ್ಯ ನೀರು ರೇಚಕ ಸ್ಥಾವರ ಉದ್ಘಾಟಿಸಿದ ಸಿಎಂ - Bangalore Water Supply and Drainage Board
ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯು ಬೆಂಗಳೂರಿನ ಕೋರಮಂಗಲ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನೂತನವಾಗಿ 210 ದಶ ಲಕ್ಷ ಲೀಟರ್ ಸಾಮರ್ಥ್ಯದ ಮಧ್ಯಂತರ ತ್ಯಾಜ್ಯ ನೀರು ರೇಚಕ ಸ್ಥಾವರವನ್ನು ನಿರ್ಮಿಸಿದೆ.
Cm yediyurappa
ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯು ಬೆಂಗಳೂರಿನ ಕೋರಮಂಗಲ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನೂತನವಾಗಿ 210 ದಶ ಲಕ್ಷ ಲೀ. ಸಾಮರ್ಥ್ಯದ ಮಧ್ಯಂತರ ತ್ಯಾಜ್ಯ ನೀರು ರೇಚಕ ಸ್ಥಾವರವನ್ನು ನಿರ್ಮಿಸಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆನ್ ಲೈನ್ ಮೂಲಕ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಉದ್ಘಾಟಿಸಿದರು.
ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಮುಖ್ಯಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಬಿ.ಡಬ್ಲ್ಯೂ.ಎಸ್.ಎಸ್.ಬಿ ಅಧ್ಯಕ್ಷ ಜಯರಾಮ್ ಸೇರಿದಂತೆ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.