ನವದೆಹಲಿ/ ಬೆಂಗಳೂರು:ಕೃಷಿ ಇಲಾಖೆಯ ಆರು ತಿಂಗಳ ಪ್ರಗತಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಕೃಷಿ ಸಷಿವ ಬಿ.ಸಿ ಪಾಟೀಲ್ ಹೇಳಿದ್ದಾರೆ.
ನವದೆಹಲಿ ಪ್ರವಾದಲ್ಲಿರುವ ಕೃಷಿ ಸಚಿವ ಬಿ.ಸಿ ಪಾಟೀಲ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ, ಕೃಷಿ ಇಲಾಖೆಯ ಆರು ತಿಂಗಳ ಪ್ರಗತಿಯ ವರದಿಯನ್ನು ಸಲ್ಲಿಕೆ ಮಾಡಿದರು. ಇಲಾಖೆಯಲ್ಲಿ ಮಾಡಿದ ಪ್ರಗತಿಯನ್ನು ಕಂಡು ಜೆ.ಪಿ ನಡ್ಡಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ರೈತರಿಗೆ ಮತ್ತು ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾದಂತೆ ಅನ್ನದಾತರಿಗೆ ಬೆನ್ನೆಲುಬಾಗಿ ನಿಂತಿದ್ದನ್ನು ಶ್ಲಾಘಿಸಿದರು ಎಂದು ಬಿ.ಸಿ ಪಾಟೀಲ್ ತಿಳಿಸಿದ್ದಾರೆ.
ರೈತ ಬೆಳೆ ಸಮೀಕ್ಷೆ ಆ್ಯಪ್, ಅಗ್ರಿ ಸ್ಟಾರ್ಟ್ ಆ್ಯಪ್ ಸೇರಿದಂತೆ ಹಲವಾರು ಪ್ರಗತಿಪರ ಯೋಜನೆಗಳನ್ನು ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿಗೊಳಿಸಿದ್ದು, ಮೆಚ್ಚುಗೆ ವ್ಯಕ್ತವಾಗಿದ್ದರಿಂದ ದೇಶದ ಇತರೆ ರಾಜ್ಯಗಳಲ್ಲಿಯೂ ಸಹ ಅಳವಡಿಕೆಗೆ ಚಿಂತನೆ ನಡೆಸಲಾಗಿದೆ ಎಂದು ರಾಷ್ಟ್ರೀಯ ಅಧ್ಯಕ್ಷರು ಮೆಚ್ಚುಗೆ ವ್ಯಕ್ತಪಡಿಸಿದರು ಎಂದರು.
ಇನ್ನು ಕರ್ನಾಟಕದ ರಾಜಕೀಯ ವಿದ್ಯಮಾನವನ್ನು ಹಂಚಿಕೊಂಡ ಅಧ್ಯಕ್ಷರು ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುವ ಬಗ್ಗೆಯೂ ಚರ್ಚಿಸಿದರು ಎಂದು ಮಾಹಿತಿ ನೀಡಿದ್ದಾರೆ.