ಬೆಳಗಾವಿ: ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿವಾದ ಸುಖಾಂತ್ಯವಾದರೂ ವಿವಾದವನ್ನು ಇನ್ನೂ ಜೀವಂತವಾಗಿಡಲು ಮಹಾರಾಷ್ಟ್ರದ ನಾಯಕರು ಯತ್ನಿಸುತ್ತಿದ್ದಾರೆ ಎನ್ನಲಾಗುತ್ತಿದೆ.
ಪೀರನವಾಡಿಯ ಮರಾಠಿ ಭಾಷಿಕರಿಗೆ ಪೊಲೀಸರಿಂದ ಅನ್ಯಾಯವಾಗಿದೆ ಎಂದು ಮಹಾರಾಷ್ಟ್ರ ನಗರಾಭಿವೃದ್ಧಿ ಇಲಾಖೆ ಸಚಿವ ಏಕನಾಥ ಶಿಂಧೆ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ. ದೇಶಭಕ್ತ ಸಂಗೊಳ್ಳಿ ರಾಯಣ್ಣನ ಬಗ್ಗೆ ನಮಗೆ ಅಭಿಮಾನವಿದೆ. ಆದರೆ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಎದುರು ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ನಮ್ಮ ವಿರೋಧವಿದೆ. ಹೀಗಾಗಿ ಪ್ರತಿಭಟನೆ ನಡೆಸುತ್ತಿದ್ದ ಮರಾಠಿ ಭಾಷಿಕರ ಮೇಲೆ ಲಾಠಿ ಚಾರ್ಜ್ ಆಗಿದೆ. ಮರಾಠಿ ಭಾಷಿಕರ ಮೇಲೆ ಪೊಲೀಸರಿಂದ ಅನ್ಯಾಯವಾಗಿದೆ ಎಂದಿದ್ದಾರೆ.