ಶಿವಮೊಗ್ಗ: ಜಿಲ್ಲೆಯಲ್ಲಿ ಪತ್ತೆಯಾಗಿರುವ ಕೋವಿಡ್ ಪಾಸಿಟಿವ್ ಪ್ರಕರಣಗಳನ್ನು ಸಮರ್ಥವಾಗಿ ನಿಭಾಯಿಸಲು ಮೆಗ್ಗಾನ್ ಆಸ್ಪತ್ರೆಯಲ್ಲಿ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಸರ್ಕಾರದ ಮಾರ್ಗಸೂಚಿ ಪ್ರಕಾರ ಸೋಂಕಿತ ವ್ಯಕ್ತಿಗಳಿಗೆ ಚಿಕಿತ್ಸೆಯನ್ನು ಒದಗಿಸಲಾಗುತ್ತಿದೆ. ಜಿಲ್ಲೆಯಲ್ಲಿ ಇದುವರೆಗೆ 119 ಸೋಂಕಿತರು ಪತ್ತೆಯಾಗಿದ್ದು, 89 ಮಂದಿ ಗುಣಮುಖರಾಗಿದ್ದಾರೆ. ಸದ್ಯ 28 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಶಿವಮೊಗ್ಗ ಮೆಡಿಕಲ್ ಕಾಲೇಜು ನಿರ್ದೇಶಕ ಡಾ.ಸಿದ್ದಪ್ಪ ಅವರು ತಿಳಿಸಿದ್ದಾರೆ.
ಸಾರ್ವಜನಿಕರ ಹಿತದೃಷ್ಟಿಯಿಂದ ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ. ಸೋಂಕಿತ ರೋಗಿಗಳಿಗಾಗಿ ಪ್ರಸ್ತುತ 100 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. 20 ಐಸಿಯು ಹಾಸಿಗೆಗಳು, 40 ಹೆಚ್‍ಡಿಯು ಹಾಸಿಗೆಗಳು ಮತ್ತು 40 ಐಸೊಲೇಷನ್ ಹಾಸಿಗೆಗಳನ್ನು ಸಜ್ಜುಗೊಳಿಸಲಾಗಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 8 ವೆಂಟಿಲೇಟರ್ ಲಭ್ಯವಿದೆ. ಕೋವಿಡ್ ಆಸ್ಪತ್ರೆಯಲ್ಲಿ ರೋಗಿಗಳು ಪ್ರತ್ಯೇಕವಾಗಿ ಒಳಬರಲು ಹಾಗೂ ಹೊರ ಹೋಗಲು ಅನುಕೂಲವಾಗುವಂತೆ ಪ್ರತ್ಯೇಕ ರ್ಯಾಂಪ್ ಸಿದ್ಧಪಡಿಸಲಾಗಿದೆ ಎಂದರು.
ಸರ್ಕಾರದ ಮಾರ್ಗಸೂಚಿ ಪ್ರಕಾರ, ಸೋಂಕಿತರಿಗೆ ಆಹಾರ ಮತ್ತು ಚಿಕಿತ್ಸೆಯನ್ನು ಒದಗಿಸಲಾಗುತ್ತಿದೆ. ವಾರ್ಡ್‍ಗಳಲ್ಲಿರುವ ಎಲ್ಲಾ ಬಾತ್‍ರೂಂಗಳಿಗೆ ಗೀಜರ್ ಅಳವಡಿಸಲಾಗಿದೆ. ಕುಡಿಯಲು ಬಿಸಿ ಹಾಗೂ ತಣ್ಣನೆಯ ನೀರು ಬರುವಂತಹ 3 ಡಿಸ್ಪೆನ್ಸರ್‍ಗಳನ್ನು ಇರಿಸಲಾಗಿದೆ. ಉತ್ತಮ ಆಹಾರವನ್ನು ಪ್ರತಿದಿನ ಒದಗಿಸಲಾಗುತ್ತಿದೆ. ಪ್ರತಿ ದಿನ 2,500 ಕ್ಯಾಲರಿಗಳಷ್ಟು ಚಪಾತಿ, ಕಾಳು ಪಲ್ಯ, ಮೊಟ್ಟೆ, ಅನ್ನ, ಸಾಂಬಾರು ಮತ್ತು ಹಣ್ಣುಗಳನ್ನು ಒಳಗೊಂಡಂತೆ ಶುದ್ಧ ಆಹಾರವನ್ನು ಒದಗಿಸಲಾಗುತ್ತಿದೆ ಎಂದು ಅವರು ವಿವರಿಸಿದರು.
ಸಾಮರ್ಥ್ಯ ಹೆಚ್ಚಳ: