ಚಿಕ್ಕೋಡಿ:ವಿಧಾನ ಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಕೋವಿಡ್-19 ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ನನಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ರಾಯಬಾಗ ಶಾಸಕ ದುರ್ಯೋಧನ ಐಹೊಳೆ ತಮ್ಮ ಫೇಸ್ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ರಾಯಬಾಗ ಶಾಸಕ ದುರ್ಯೋಧನ ಐಹೊಳೆಗೂ ತಗುಲಿದ ಕೊರೊನಾ - Rayabaga mla duryodhana aihole
ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಮನೆಯಲ್ಲಿ ಕ್ವಾರಂಟೈನ್ ಆಗಿದ್ದೇನೆ ಎಂದು ತಿಳಿಸಿದ್ದಾರೆ.
![ರಾಯಬಾಗ ಶಾಸಕ ದುರ್ಯೋಧನ ಐಹೊಳೆಗೂ ತಗುಲಿದ ಕೊರೊನಾ duryodhana aihole](https://etvbharatimages.akamaized.net/etvbharat/prod-images/768-512-09:53:39:1600662219-kn-ckd-1-raibag-mla-corona-positive-script-ka10023-21092020095250-2109f-1600662170-857.jpg)
ನನಗೆ ಯಾವುದೇ ರೀತಿಯ ರೋಗದ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಬೆಂಗಳೂರಿನ ಮನೆಯಲ್ಲಿ ಪ್ರತ್ಯೇಕವಾಗಿರುತ್ತೇನೆ. ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ. ಜೊತೆಗೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ತೊಡಕಾಗದಂತೆ ಸೂಕ್ತ ಚಿಕಿತ್ಸೆ ಪಡೆಯುತ್ತಾ, ನಾನು ರಾಯಬಾಗದಿಂದ ನನ್ನ ಕಾರ್ಯ ಚಟುವಟಿಕೆಗಳನ್ನು ಮುಂದುವರೆಸುತ್ತೇನೆ ಎಂದು ತಿಳಿಸಿದ್ದಾರೆ.
ಯಾವುದಾದರು ಸಮಸ್ಯೆಗಳಿದ್ದರೆ ನನ್ನನ್ನು ನೇರವಾಗಿ ದೂರವಾಣಿ ಮುಖಾಂತರ ಸಂಪರ್ಕಿಸಬೇಕೆಂದು ಈ ಮೂಲಕ ಕೇಳಿಕೊಳ್ಳುತ್ತೇನೆ ಎಂದು ತಮ್ಮ ಫೇಸ್ಬುಕ್ ಖಾತೆಯ ಮೂಲಕ ಕ್ಷೇತ್ರದ ಜನರಿಗೆ ಮನವಿ ಮಾಡಿಕೊಂಡಿದ್ದಾರೆ.