ಬೆಂಗಳೂರು: ಸ್ಯಾಂಡಲ್ವುಡ್ ನಲ್ಲಿ ಡ್ರಗ್ಸ್ ದಂಧೆ ನಡೆಯುತ್ತಿದೆ ಎಂಬ ಸುದ್ದಿ ಕೇಳಿಬಂದ ಕಾರಣ ತನಿಖಾಧಿಕಾರಿಗಳು ಅಲರ್ಟ್ ಆಗಿದ್ದಾರೆ. ಎನ್ಸಿಬಿ ಈ ಡ್ರಗ್ಸ್ ಜಾಲದ ಕುರಿತು ತನಿಖೆ ನಡೆಸುತ್ತಿದೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ.
ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾ: ಆರೋಪಿಗಳ ವಿರುದ್ಧ ಸೂಕ್ತ ಕ್ರಮ: ಪ್ರವೀಣ್ ಸೂದ್
ಈಗಾಗಲೇ ಎನ್ಸಿಬಿ ಡ್ರಗ್ಸ್ ಜಾಲದ ಕುರಿತು ತನಿಖೆ ನಡೆಸುತ್ತಿದೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ.
State Police Director General Praveen Sood
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಡ್ರಗ್ಸ್ ಮಾಫಿಯಾ ಬಗ್ಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ. ಡ್ರಗ್ಸ್ ಮಾಫಿಯಾದಲ್ಲಿ ಹೆಚ್ಚು ನೈಜಿರಿಯನ್ ಪ್ರಜೆಗಳು ವಿದ್ಯಾಭ್ಯಾಸಕ್ಕೆಂದು ಇಲ್ಲಿಗೆ ಬಂದು ಬಳಿಕ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗ್ತಾರೆ. ಇದು ಮೊದಲಿನಿಂದಲೂ ಸಹ ನಡೆದುಕೊಂಡು ಬಂದಿದೆ. ನಾವು ಈ ಬಗ್ಗೆ ಕಠಿಣ ಕ್ರಮ ಕೈಗೊಂಡು ವೀಸಾ ಅವಧಿ ಮುಗಿದ ವಿದೇಶಿಗರ ವಿರುದ್ಧ ಕಾರ್ಯಾಚರಣೆ ನಡೆಸುತ್ತೇವೆ. ಅಕ್ರಮ ಮಾದಕ ವಸ್ತು ಮಾರಾಟದ ಬಗ್ಗೆಯೂ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಡಿಜಿಪಿ ಎಚ್ಚರಿಕೆ ರವಾನಿಸಿದ್ದಾರೆ.