ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ವಿಶೇಷ ಪೂಜೆ ಹಾಗೂ ಬನ್ನಿ ಪೂಜೆಯನ್ನು ನೆರವೇರಿಸಲಾಗುತ್ತಿತ್ತು. ಆದರೆ ಈ ಬಾರಿ ಕೊರೊನಾ ಹಿನ್ನೆಲೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ಕೊರೊನಾ ಭೀತಿ: ವಿಜಯ ದಶಮಿಯಂದು ಸುತ್ತೂರು ಮಠಕ್ಕೆ ಸಾರ್ವಜನಿಕರಿಗಿಲ್ಲ ಪ್ರವೇಶ - ಸುತ್ತೂರು ಶಾಖಾಮಠ
ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಈ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ಸುತ್ತೂರು ಮಠಕ್ಕೆ ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Suttur math
ಸುತ್ತೂರು ಶಾಖಾ ಮಠಕ್ಕೆ ಪ್ರತಿ ವರ್ಷ ಗಣ್ಯರು, ಸಾರ್ವಜನಿಕರು ಹಾಗೂ ಭಕ್ತಾದಿಗಳು ಭೇಟಿ ನೀಡಿ ಪೂಜ್ಯರ ದರ್ಶನ, ಆಶೀರ್ವಾದ ಪಡೆಯುತ್ತಿದ್ದರು. ಆದರೆ ಈ ವರ್ಷ ಕೋವಿಡ್ ವೈರಸ್ ಹರಡುವಿಕೆ ಮುಂದುವರೆದ ಹಿನ್ನೆಲೆ ಅದಕ್ಕೆಲ್ಲಾ ಬ್ರೇಕ್ ಹಾಕಲಾಗಿದೆ.
ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಈ ವರ್ಷ ಸಾಂಪ್ರದಾಯಿಕವಾಗಿ ಪೂಜಾ ಕಾರ್ಯಕ್ರಮವನ್ನು ನೆರವೇರಿಸಲಾಗುತ್ತದೆ. ಆದರೆ ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.