ಬೆಳಗಾವಿ : ನಗರದ ಬಾಗಲಕೋಟೆ ಹೆದ್ದಾರಿಯ ಸಾಂಬ್ರಾ ಬಳಿ ಆಟೋಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅರ್ಧ ಹೆಲ್ಮೆಟ್ ಧರಿಸಿದ್ದ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಅರ್ಧ ಹೆಲ್ಮೆಟ್ ತಂದ ಸಂಚಕಾರ : ಅಪಘಾತದಲ್ಲಿ ಯುವಕ ಸಾವು - undefined
ಬೆಳಗಾವಿ-ಬಾಗಲಕೋಟೆ ಹೆದ್ದಾರಿ ಬಳಿ ಆಟೋಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅರ್ಧ ಹೆಲ್ಮೆಟ್ ಧರಿಸಿ ಬೈಕ್ ಚಲಾಯಿಸುತ್ತಿದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಅಪಘಾತದಲ್ಲಿ ಯುವಕ ಸಾವು
ತಾಲೂಕಿನ ಸಾಂಬ್ರಾ ಗ್ರಾಮದ ಯುವಕ ಸುನೀಲ್ ಯಡ್ಡೆ ದ್ವಿಚಕ್ರ ವಾಹದಲ್ಲಿ ಬೆಳಗಾವಿಯಿಂದ ಸಾಂಬ್ರಾ ಕಡೆಗೆ ಹೋಗುತ್ತಿದ್ದ. ಈ ವೇಳೆ ಬೆಳಗಾವಿ ಮತ್ತು ಬಾಗಲಕೋಟೆ ಹೆದ್ದಾರಿಯಲ್ಲಿ ಎದುರಿಗೆ ಬರುತ್ತಿದ್ದ ಅಟೋಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನ ತಲೆಗೆ ಗಂಭೀರ ಗಾಯವಾಗಿದೆ. ಪೂರ್ಣ ಪ್ರಮಾಣದ ಹೆಲ್ಮೆಟ್ ಧರಿಸಿದ್ದರೆ ಯಾವುದೇ ಅಪಾಯವಾಗುತ್ತಿರಲಿಲ್ಲ ಎಂದು ತಿಳಿದು ಬಂದಿದೆ.
Last Updated : Jul 4, 2019, 2:26 PM IST