ಕರ್ನಾಟಕ

karnataka

ETV Bharat / state

ಬೆಂಗಳೂರು ಲಾಕ್​​ಡೌನ್​​​: ಕೇಂದ್ರಕ್ಕೆ ಮಾಹಿತಿ ನೀಡಿದ ರಾಜ್ಯ ಸರ್ಕಾರ - Central health minister harshavardhan news

ಆರೋಗ್ಯ ಸಚಿವ ಬಿ.ಶ್ರೀರಾಮುಲು, ರಾಜ್ಯದ ಕೋವಿಡ್-19 ಸ್ಥಿತಿಗತಿಗಳ ಬಗ್ಗೆ ಮತ್ತು ಕೊರೊನಾ ಸೋಂಕು ಹರಡದಂತೆ ತೆಗೆದುಕೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಕೇಂದ್ರಕ್ಕೆ ಮಾಹಿತಿ ನೀಡಿದ್ದಾರೆ.

Ramulu
Ramulu

By

Published : Jul 15, 2020, 9:47 AM IST

ಬೆಂಗಳೂರು: ಒಂದು ವಾರ ಲಾಕ್​​ಡೌನ್ ಜಾರಿ ಮಾಡಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತು ಕೇಂದ್ರ ಆರೋಗ್ಯ ಇಲಾಖೆಗೆ ರಾಜ್ಯ ಸರ್ಕಾರ ಸಮಗ್ರ ಮಾಹಿತಿ ನೀಡಿದೆ.

ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಜೊತೆ ದೂರವಾಣಿ ಮೂಲಕ ಮಾತನಾಡಿದ ರಾಜ್ಯದ ಆರೋಗ್ಯ ಸಚಿವ ಬಿ.ಶ್ರೀರಾಮುಲು, ರಾಜ್ಯದ ಕೋವಿಡ್-19 ಸ್ಥಿತಿಗತಿಗಳ ಬಗ್ಗೆ ವಿವರ ನೀಡಿದರು. ಜೊತೆಗೆ ಕೊರೊನಾ ಸೋಂಕು ಹರಡದಂತೆ ತೆಗೆದುಕೊಂಡ ಮುನ್ನೆಚ್ಚರಿಕಾ ಕ್ರಮಗಳು ಮತ್ತು ಇದೀಗ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ವಿಧಿಸಲಾಗಿರುವ ಒಂದು ವಾರದ ಲಾಕ್​​ಡೌನ್ ಬಗ್ಗೆ ಮಾಹಿತಿ ನೀಡಿ ಮಾತುಕತೆ ನಡೆಸಿದರು.

ರಾಜ್ಯದ ವಸ್ತುಸ್ಥಿತಿಯ ವಿವರ ಪಡೆದುಕೊಂಡ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್, ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸಕಲ ನೆರವನ್ನು ಕೇಂದ್ರ ಸರ್ಕಾರ ನೀಡಲಿದೆ ಎಂಬ ಭರವಸೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಸಚಿವ ಬಿ.ಶ್ರೀರಾಮುಲು, ಕೇಂದ್ರ ಸಚಿವರಿಗೆ ಧನ್ಯವಾದ ತಿಳಿಸಿದ್ದಾರೆ.

ABOUT THE AUTHOR

...view details