ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆ ಕೂಡ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು, ಕರಾವಳಿ, ಮಲೆನಾಡಿನ ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

20 ಸೆಂ.ಮೀ.ಗಿಂತ ಅಧಿಕ ಮಳೆಯಾಗುವ ಪ್ರದೇಶಗಳು:
ವಿಜಯಪುರ, ಕಲಬುರಗಿ, ಬೆಳಗಾವಿ ಬಾಗಲಕೋಟೆ ಜಿಲ್ಲೆಗಳು ಮತ್ತು ಮಲೆನಾಡು ಜಿಲ್ಲೆಗಳಾದ ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗಲಿದೆ.
ಇನ್ನು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಾಳೆ ಸಾಧಾರಣ ಮಳೆಯಾಗಲಿದೆ. ಜೊತೆಗೆ ರಾಜ್ಯದ ಇತರೆ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗಲಿದೆ ಎಂದು ಕೆಎಸ್ಎನ್ಡಿಎಂಸಿ ಮುನ್ಸೂಚನೆ ನೀಡಿದೆ.