ಕರ್ನಾಟಕ

karnataka

ETV Bharat / state

ಯತಿರಾಜ ಮಠದ ಶ್ರೀಗಳಿಗೆ ತುಮಕೂರು ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ

ಯತಿರಾಜ ಮಠದ ಶ್ರೀಗಳು ರಾಮಾನುಜಾಚಾರ್ಯರ ತತ್ವ ಮತ್ತು ಸಿದ್ಧಾಂತದ ಅನುಯಾಯಿಗಳಾಗಿದ್ದಾರೆ. ವಸುಧೈವ ಕುಟುಂಬಕಂ ಸೂತ್ರದಲ್ಲಿ ನಂಬಿಕೆ ಇಟ್ಟಿರುವ ಅವರು, ಸನಾತನ ಧರ್ಮದ ಸಂರಕ್ಷಕರಾಗಿದ್ದಾರೆ ಎಂದು ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.

tumkur-university-honorary-doctorate-conferred-to-yadugiri-yathiraja-narayana-jeeyar-in-bengaluru
ಯತಿರಾಜ ಮಠದ ಶ್ರೀಗಳಿಗೆ ತುಮಕೂರು ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ

By

Published : Jul 30, 2022, 8:12 PM IST

Updated : Jul 30, 2022, 9:10 PM IST

ಬೆಂಗಳೂರು: ಯದುಗಿರಿ ಯತಿರಾಜ ಮಠದ ಶ್ರೀಗಳಾದ ಯದುಗಿರಿ ಯತಿರಾಜ ನಾರಾಯಣ ಜೀಯರ್ ಸ್ವಾಮೀಜಿ ಅವರಿಗೆ ಶನಿವಾರ ತುಮಕೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ನಗರದ ಚೌಡಯ್ಯ ಭವನದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​ ಅವರು ಶ್ರೀಗಳಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.

ಸಮಕುಲಾಧಿಪತಿಗಳೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅಶ್ವತ್ಥನಾರಾಯಣ ಮಾತನಾಡಿ, ಯತಿರಾಜ ಮಠದ ಶ್ರೀಗಳು ರಾಮಾನುಜಾಚಾರ್ಯರ ತತ್ವ ಮತ್ತು ಸಿದ್ಧಾಂತದ ಅನುಯಾಯಿಗಳಾಗಿದ್ದಾರೆ. ವಸುಧೈವ ಕುಟುಂಬಕಂ ಸೂತ್ರದಲ್ಲಿ ನಂಬಿಕೆ ಇಟ್ಟಿರುವ ಅವರು, ಸನಾತನ ಧರ್ಮದ ಸಂರಕ್ಷಕರಾಗಿದ್ದಾರೆ ಎಂದರು.

ಯತಿರಾಜ ಮಠದ ಶ್ರೀಗಳಿಗೆ ತುಮಕೂರು ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ

ಸ್ವಾಮೀಜಿಗಳು ಸರ್ವ ಸಮಾನತೆ ಮತ್ತು ನೈತಿಕ ಜಾಗೃತಿಯ ಪ್ರತಿಷ್ಠಾಪಿಸುತ್ತಿದ್ದಾರೆ. ಇದರಿಂದಾಗಿ ಶ್ರೀಗಳ ನಡೆ-ನುಡಿಗಳಿಗೆ ಸಾಮಾಜಿಕ ಆಯಾಮ ಬಂದಿದೆ. ರಾಮಾನುಜ ಇಂಟಿಗ್ರೇಟೆಡ್ ರೂರಲ್ ಡೆವಲಪ್ಮೆಂಟ್ ಕಾರ್ಯಕ್ರಮದಡಿ ತೊಂಡನೂರಿನ ಶಾಲೆಯನ್ನು ದತ್ತು ತೆಗೆದುಕೊಂಡಿದ್ದಾರೆ. ಅಲ್ಲಿಗೆ ಕಂಪ್ಯೂಟರ್​ಗಳನ್ನು ಕೊಡುಗೆಯಾಗಿ ನೀಡಿದ್ದು, ಶೈಕ್ಷಣಿಕ ಮತ್ತು ಸಾಮಾಜಿಕ ಸಬಲೀಕರಣದ ಹಾದಿಯಲ್ಲಿ ಸಾಗಿದ್ದಾರೆ ಎಂದು ನುಡಿದರು.

ಶ್ರೀಗಳು ಕಾಶ್ಮೀರದಲ್ಲೂ ರಾಮಾನುಜರ ಪ್ರತಿಮೆ ಸ್ಥಾಪಿಸಿದ್ದಾರೆ. ಮುಂಬರುವ ದಿನಗಳಲ್ಲಿ ಮಲ್ಲೇಶ್ವರಂ ವ್ಯಾಪ್ತಿಯಲ್ಲಿ ಕೂಡ ಆಚಾರ್ಯರ ಪ್ರತಿಮೆ ಅನಾವರಣ ಆಗಲಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ನೈತಿಕ ಮೌಲ್ಯಗಳ ಕಲಿಕೆಗೆ ಆದ್ಯತೆ ಕೊಡಲಾಗಿದೆ. ಇದಕ್ಕೆ ಸಾಧು ಸಂತರ ಮನಃಪೂರ್ವಕ ಬೆಂಬಲವಿದೆ. ಇದಕ್ಕಾಗಿ ಪ್ರಧಾನಿ ಮೋದಿ ಅಭಿನಂದನಾರ್ಹರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕುಲಪತಿ ವೆಂಕಟೇಶ್ವರಲು, ಕುಲಸಚಿವ ನಿರ್ಮಲ್ ರಾಜು ಮುಂತಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ:ಪರಿಷತ್​ ಉಪಚುನಾವಣೆ: ಬಾಬುರಾವ್ ಚಿಂಚನಸೂರ್​ಗೆ ಟಿಕೆಟ್ ಘೋಷಿಸಿದ ಬಿಜೆಪಿ

Last Updated : Jul 30, 2022, 9:10 PM IST

ABOUT THE AUTHOR

...view details