ಕರ್ನಾಟಕ

karnataka

ETV Bharat / state

ಚಿತ್ರದುರ್ಗದಲ್ಲಿ ಕೊರೊನಾಗೆ ಇಬ್ಬರು ಬಲಿ - ಚಿತ್ರದುರ್ಗ ಕೊರೊನಾ ಸೋಂಕಿತ ಸಾವು ನ್ಯೂಸ್

ಚಿತ್ರದುರ್ಗ ನಗರದ ಕೋವಿಡ್-19 ಆಸ್ಪತ್ರೆಯಲ್ಲಿ ಇಂದು ಇಬ್ಬರು ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Chitradurgha
Chitradurgha

By

Published : Jul 24, 2020, 4:58 PM IST

ಚಿತ್ರದುರ್ಗ : ಮಹಾಮಾರಿ ಕೊರೊನಾಗೆ ಬಲಿಯಾಗುತ್ತಿರುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದ್ದು, ಇಂದೂ ಸಹ ಇಬ್ಬರು ಕೊನೆಯುಸಿರೆಳೆದಿದ್ದಾರೆ.

ಚಿತ್ರದುರ್ಗ ನಗರದ ಕೋವಿಡ್-19 ಆಸ್ಪತ್ರೆಯಲ್ಲಿ ಇಂದು ಇಬ್ಬರು ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಚಿತ್ರದುರ್ಗದ ಜೆಸಿಆರ್ ಬಡಾವಣೆಯ 40 ವರ್ಷದ ಮಹಿಳೆ ಸೇರಿದಂತೆ ನಗರದ ಹೊಳಲ್ಕೆರೆ ರಸ್ತೆಯ 70 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ.

ಈ ಇಬ್ಬರು ಸೋಂಕಿತರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆ ಚಿತ್ರದುರ್ಗದ ಕೋವಿಡ್ 19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು. ಅದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಸಾವನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ವಿನೋತ್ ಪ್ರಿಯಾ ಮಾಹಿತಿ ನೀಡಿದ್ದಾರೆ.

For All Latest Updates

ABOUT THE AUTHOR

...view details