ವೆನ್ಲಾಕ್ ಆಸ್ಪತ್ರೆಯಲ್ಲಿ ಶೀಘ್ರ ಒಳರೋಗಿ ಸೇವೆ ಆರಂಭ: ಸಚಿವ ಕೋಟ ಶ್ರೀನಿವಾಸ ಪೂಜಾರಿ - Minister kota srinivasa poojari
ವೆನ್ಲಾಕ್ ಜಿಲ್ಲಾಸ್ಪತ್ರೆಯನ್ನು ಕೋವಿಡ್‍ಗೆ ನಿಗದಿತ ಆಸ್ಪತ್ರೆಯಾಗಿ ಪರಿಗಣಿಸಿದ್ದರಿಂದ ಇತರ ಸೇವೆಗಳನ್ನು ನಿಲ್ಲಿಸಲಾಗಿತ್ತು. ಸಧ್ಯ ಶೀಘ್ರವೇ ಒಳರೋಗಿ ಸೇವೆ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಮಂಗಳೂರು: ಕೋವಿಡ್ ಆಸ್ಪತ್ರೆಯಾಗಿ ಬದಲಾಗಿರುವ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಶೀಘ್ರವೇ ಒಳರೋಗಿ ಸೇವೆ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ ಸೋಂಕು ನಿರ್ವಹಣೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವೆನ್ಲಾಕ್ ಆಸ್ಪತ್ರೆಯನ್ನು ಕೋವಿಡ್‍ಗೆ ನಿಗದಿತ ಆಸ್ಪತ್ರೆಯಾಗಿ ಪರಿಗಣಿಸಿದ್ದರಿಂದ ಇತರ ಸೇವೆಗಳನ್ನು ನಿಲ್ಲಿಸಲಾಗಿತ್ತು. ಪರಿಣಾಮ ಸಾರ್ವಜನಿಕರು ತೊಂದರೆಯಾಗೆ ಒಳಗಾಗುತ್ತಿದ್ದಾರೆ. ಈಗಾಗಲೇ ಇಲ್ಲಿ ಹೊರರೋಗಿ ಸೇವೆ ಆರಂಭಿಸಲಾಗಿದ್ದು, ಶೀಘ್ರವೇ ಒಳರೋಗಿಗಳ ವಿಭಾಗವನ್ನು ತೆರೆಯಲಾಗುವುದು ಎಂದರು.
ಹೊರರೋಗಿಗಳ ವಿಭಾಗದಲ್ಲಿ ಪ್ರತೀದಿನ 250ರಷ್ಟು ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಕನಿಷ್ಠ 100 ಒಳರೋಗಿಗಳ ಸೇವೆ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು.
ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಮಾತನಾಡಿ, ಕೋವಿಡ್ ಸೋಂಕಿತರು ಖಾಸಗಿ ಆಸ್ಪತ್ರೆಗಳಲ್ಲೂ ದಾಖಲಾಗಿ ನಿಗದಿತ ವೆಚ್ಚವನ್ನು ಭರಿಸಿ ಚಿಕಿತ್ಸೆ ಪಡೆಯಬಹುದು. ಆಯುಷ್ಮಾನ್ ಯೋಜನೆಯಡಿ ಚಿಕಿತ್ಸೆ ಪಡೆಯುವವರು ಆರೋಗ್ಯ ಇಲಾಖೆಯ ಶಿಫಾರಸ್ಸಿನೊಂದಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಹೇಳಿದರು.