ಕರ್ನಾಟಕ

karnataka

ETV Bharat / state

ಹೆಂಡತಿಯನ್ನು ಕೊಂದು ಗಂಡ ಆತ್ಮಹತ್ಯೆ: ಅನಾಥವಾದ ಮಕ್ಕಳು - ಕುಡಿದ ಅಮಲಿನಲ್ಲಿ ಹೆಂಡತಿ ಮೇಲೆ ಹಲ್ಲೆ

ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿ ಮೇಲೆ ಗಂಭೀರ ಹಲ್ಲೆ ನಡೆಸಿ, ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Crime
Crime

By

Published : Aug 29, 2020, 10:43 AM IST

ಕಾರವಾರ: ಪತ್ನಿಯ ಶೀಲ ಶಂಕಿಸಿ ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ಆಕೆಯ ಮೇಲೆ ಗಂಭೀರ ಹಲ್ಲೆ ನಡೆಸಿ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊನ್ನಾವರ ತಾಲೂಕಿನ ಮೇಲಿನ ಇಡಗುಂಜಿಯ ಕುಳಿಮನೆಯಲ್ಲಿ ತಡರಾತ್ರಿ ನಡೆದಿದೆ.

ಗಂಭೀರ ಹಲ್ಲೆಗೊಳಗಾಗಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಕುಳಿಮನೆಯ ವೆಂಕಟೇಶ ನಾಯ್ಕ (38) ಎಂಬಾತ ಆತ್ಮಹತ್ಯೆ ಮಾಡವನು.

ಪ್ರತಿನಿತ್ಯ ಕುಡಿದು ಬರುತ್ತಿದ್ದ ಈತ, ದುಡಿದ ಹಣವನ್ನು ಮನೆಗೆ ನೀಡುತ್ತಿರಲಿಲ್ಲವಂತೆ. ಅಲ್ಲದೆ ಹೆಂಡತಿಯನ್ನು ಸಂಶಯದಿಂದ ನೋಡುತ್ತಿದ್ದ ಎನ್ನಲಾಗಿದೆ. ನಿನ್ನೆ ತಡರಾತ್ರಿ ಹೆಂಡತಿ ಮೇಲೆ ಗಂಭೀರ ಹಲ್ಲೆ ನಡೆಸಿ, ತನ್ನ ಇಬ್ಬರು ಮಕ್ಕಳು ಹಾಗೂ ಮನೆಯಲ್ಲಿದ್ದ ಸಂಬಂಧಿಕರ ಇಬ್ಬರು ಮಕ್ಕಳನ್ನು ಕೋಣೆಯಲ್ಲಿ ಕೂಡಿ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಂಡ-ಹೆಂಡತಿ ಇಬ್ಬರೂ ಸಾವನ್ನಪ್ಪಿದ್ದು, ಇದೀಗ ಮಕ್ಕಳು ಅನಾಥವಾಗಿದ್ದಾರೆ.

ಈ ಬಗ್ಗೆ ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details