ಕರ್ನಾಟಕ

karnataka

ETV Bharat / state

ಬಾಲ ಕಾರ್ಮಿಕ ಪದ್ಧತಿ ಬೇರು ಸಮೇತ ನಿರ್ಮೂಲನೆಯಾಗಬೇಕು: ಡಿಸಿ ವಿನೋತ್ ಪ್ರಿಯಾ - World anti child labor day

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧ ದಿನದ ಪ್ರಯುಕ್ತ ಬಾಲ್ಯ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಅಂಗವಾಗಿ ಆಟೋ ಮೂಲಕ ಜನ ಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಡಿಸಿ ಆರ್. ವಿನೋತ್ ಪ್ರಿಯಾ ಚಾಲನೆ ನೀಡಿದರು.

World anti child labor day celebration in chitradurga
World anti child labor day celebration in chitradurga

By

Published : Jun 13, 2020, 10:45 PM IST

ಚಿತ್ರದುರ್ಗ: 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಮತ್ತು 18 ವರ್ಷದೊಳಗಿನ ಕಿಶೋರಾವಸ್ಥೆ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಜಿಲ್ಲಾಧಿಕಾರಿ ಆರ್. ವಿನೋತ್ ಪ್ರಿಯಾ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ ಮತ್ತು ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸೊಸೈಟಿ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಯುಕ್ತ ಆಟೋ ಮೂಲಕ ಜನ ಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರಿಸಿ ಅವರು ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಬಾಲ ಕಾರ್ಮಿಕರನ್ನು ನೇಮಿಸಿಕೊಂಡ ಮಾಲೀಕರಿಗೆ ದಂಡ ಹಾಗೂ 2 ವರ್ಷ ಸೆರೆಮನೆ ವಾಸದ ಶಿಕ್ಷೆಗೆ ಒಳಪಡಿಸಬಹುದು. ತಪ್ಪಿತಸ್ಥ ಮಾಲೀಕರ ವಿರುದ್ಧ ಪೊಲೀಸ್ ಇಲಾಖೆಯಿಂದ ಎಫ್‍ಐಆರ್ ಸಹ ದಾಖಲಿಸಬಹುದು. ಕೆಲಸಕ್ಕೆ ಸೇರಿಸಿದ ಪಾಲಕರ ಮೇಲೆಯೂ ಮೊಕದ್ದಮೆ ದಾಖಲಿಸಬಹುದು ಎಂದು ಹೇಳಿದರು.

ABOUT THE AUTHOR

...view details