ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಜಾಗೃತಿಗೆ ಆಟೋ ಮೂಲಕ ಪ್ರಚಾರ - Dharwad district news
ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಪ್ರಯುಕ್ತ ಆಟೋ ಮೂಲಕ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಹುಬ್ಬಳ್ಳಿ:ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಅಂಗವಾಗಿ ಆಟೋ ಮೂಲಕ ಪ್ರಚಾರ ಕಾರ್ಯಕ್ರಮಕ್ಕೆ ಹುಬ್ಬಳ್ಳಿ ನೂತನ ನ್ಯಾಯಾಲಯದ ಆವರಣದಲ್ಲಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಒಂದನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ದೇವಿಂದ್ರಪ್ಪ ಎನ್. ಬಿರಾದಾರ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸಮಿತಿಯ ಅಧ್ಯಕ್ಷರಾದ ಎ.ಕೆ. ನಾಗರಾಜಪ್ಪ, ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಮಾದೇಶ.ವಿ, ವಕೀಲರ ಸಂಘದ ಅಧ್ಯಕ್ಷ ಅಶೋಕ ವಿ. ಬಳಿಗಾರ, ಪ್ರಧಾನ ಕಾರ್ಯದರ್ಶಿ ಗುರು ಎಫ್. ಹಿರೇಮಠ, ಕಾರ್ಮಿಕ ನಿರೀಕ್ಷಕ ಅಶೋಕ ಒಡೆಯರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.