ಕರ್ನಾಟಕ

karnataka

ETV Bharat / state

ತುಮಕೂರು : ನಾಲ್ವರು ಜೆಡಿಎಸ್ ಅಭ್ಯರ್ಥಿಗಳು ಸೇರಿ 11 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ತುಮಕೂರು ಜಿಲ್ಲೆಯ ಹನ್ನೊಂದು ವಿಧಾನಸಭಾ ಕ್ಷೇತ್ರದಿಂದ ಹನ್ನೊಂದು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

11-candidates-submitted-nomination-in-tumkur
ತುಮಕೂರು : ನಾಲ್ಕು ಜೆಡಿಎಸ್ ಅಭ್ಯರ್ಥಿಗಳು ಸೇರಿ 11 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

By

Published : Apr 15, 2023, 10:49 PM IST

ತುಮಕೂರು :ಜಿಲ್ಲೆಯಲ್ಲಿ ಇಂದು ಒಟ್ಟು ಹನ್ನೊಂದು ವಿಧಾನಸಭಾ ಕ್ಷೇತ್ರಗಳಲ್ಲಿನ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಪೈಕಿ ನಾಲ್ಕು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಶನಿವಾರ ಜಿಲ್ಲೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಗಮಿಸಿದ್ದರಿಂದ ಅವರ ಸಮ್ಮುಖದಲ್ಲಿಯೇ ನಾಮಪತ್ರ ಸಲ್ಲಿಸಲು ಜೆಡಿಎಸ್​ ಅಭ್ಯರ್ಥಿಗಳು ನಿರ್ಧರಿಸಿದ್ದರು. ಆದರೆ ಕುಮಾರಸ್ವಾಮಿಯವರು ಬರುವುದು ತಡವಾದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಪೂರ್ವ ನಿಗದಿಯಂತೆ ನಾಮಪತ್ರವನ್ನು ಸಲ್ಲಿಸಿದರು. ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್​​ ಪಕ್ಷದಿಂದ ಸಿ.ಬಿ. ಸುರೇಶ್‍ಬಾಬು ಅವರು ನಾಮಪತ್ರ ಸಲ್ಲಿಸಿದರು. ಇನ್ನು ಇಲ್ಲಿಂದ ಕಾಂಗ್ರೆಸ್ ಅಭ್ಯರ್ಥಿ ಕೆ.ಎಸ್. ಕಿರಣ್ ಕುಮಾರ್ ಮತ್ತು ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ಮಾಧುಸ್ವಾಮಿ ನಾಮಪತ್ರ ಸಲ್ಲಿಸಲು ಸಿದ್ದತೆ ನಡೆಸಿದ್ದಾರೆ.

ತಿಪಟೂರು ವಿಧಾನಸಭೆ ಕ್ಷೇತ್ರಕ್ಕೆ ಜೆಡಿಎಸ್​​ ಪಕ್ಷದಿಂದ ಕೆ.ಟಿ. ಶಾಂತಕುಮಾರ ಅವರು ನಾಮಪತ್ರ ಸಲ್ಲಿಸಿದರು. ಈ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಸಚಿವ ಬಿ.ಸಿ. ನಾಗೇಶ್ ಸ್ಪರ್ಧೆ ಮಾಡುತ್ತಾರೆ.

ತುರುವೇಕೆರೆ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್​ನಿಂದ ಎಂ.ಟಿ.ಕೃಷ್ಣಪ್ಪ ನಾಮಪತ್ರ ಸಲ್ಲಿಕೆ ಮಾಡಿದರು. ಜೊತೆಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ರಾಮ್‍ಪ್ರಸಾದ್ ಅವರು ಉಮೇದುವಾರಿಕೆ ಸಲ್ಲಿಸಿದ್ದಾರೆ. ಬಿಜೆಪಿಯಿಂದ ಶಾಸಕ ಮಸಾಲೆ ಜಯರಾಂ ಸ್ಪರ್ಧಿಸಲಿದ್ದಾರೆ.

ಕೊರಟಗೆರೆ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್​ನಿಂದ ಪಿ.ಆರ್.ಸುಧಾಕರ ಲಾಲ್ ಅವರು ನಾಮಪತ್ರ ಸಲ್ಲಿಸಿದರು. ಇಲ್ಲಿ ಕಾಂಗ್ರೆಸ್​ ಪಕ್ಷದಿಂದ ಡಾ. ಜಿ. ಪರಮೇಶ್ವರ್ ಹಾಗೂ ಬಿಜೆಪಿ ಅಭ್ಯರ್ಥಿ ಅನಿಲ್ ನಾಮಪತ್ರ ಸಲ್ಲಿಕೆಗೆ ಸಿದ್ದತೆ ನಡೆಸಿದ್ದಾರೆ. ಉತ್ತಮ ಪ್ರಜಾಕೀಯ ಪಕ್ಷದಿಂದ ನಾಗೇಂದ್ರ ಟಿ.ಎನ್. ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಕುಣಿಗಲ್ ವಿಧಾನಸಭಾ ಕ್ಷೇತ್ರದಿಂದ ಇಂದು ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ. ತುಮಕೂರು ನಗರ ಕ್ಷೇತ್ರದಿಂದ ಸೋಷಿಯಲಿಸ್ಟಿಕ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯೂನಿಸ್ಟ್) ಎಂ.ವಿ. ಕಲ್ಯಾಣಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದಿಂದ ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ.

ಇದನ್ನೂ ಓದಿ.. ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ: ಅಭ್ಯರ್ಥಿಗಳಲ್ಲಿ ಹೆಚ್ಚಿದ ಆತಂಕ, ಮತದಾರರಲ್ಲಿ ಕುತೂಹಲ

ಗುಬ್ಬಿ ವಿಧಾನಸಭಾ ಕ್ಷೇತ್ರಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಪ್ರವೀಣ್ ಎಸ್.ಆರ್. ನಾಮಪತ್ರ ಸಲ್ಲಿಸಿದ್ದಾರೆ. ಶಿರಾ ಕ್ಷೇತ್ರಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ರಂಗನಾಥ ಅವರು ನಾಮಪತ್ರ ಸಲ್ಲಿಸಿದ್ದರೆ, ಆಮ್ ಆದ್ಮಿ ಪಕ್ಷದಿಂದ ಶಶಿಕುಮಾರ್ ಆರ್. ಅವರು ನಾಮಪತ್ರ ಸಲ್ಲಿಸಿದ್ದಾರೆ. ಪಾವಗಡ ಕ್ಷೇತ್ರ ಹಾಗೂ ಮಧುಗಿರಿ ಕ್ಷೇತ್ರದಿಂದ ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ.

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಮೇ ರಂದು ಜರುಗಲಿದ್ದು, ಮೇ 13ಕ್ಕೆ ಫಲಿತಾಂಶ ಹೊರಬೀಳಲಿದೆ. ಅಂದೇ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ತಿಳಿಯಲಿದೆ. ಈ ಬಾರಿ ಮೂರು ಪಕ್ಷಗಳಲ್ಲಿ ಭಾರಿ ಪೈಪೋಟಿ ನಡೆದಿದ್ದು, ಪ್ರಚಾರ ಭರಾಟೆ ಜೋರಾಗಿದೆ. ಎಲ್ಲ ಪಕ್ಷಗಳ ಮುಖಂಡರು, ನಾಯಕರು ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ.

ಇದನ್ನೂ ಓದಿ :ರಮೇಶ್ ಜಾರಕಿಹೊಳಿಯಿಂದಲೇ ನಾನು ಬಿಜೆಪಿಯನ್ನು ಬಿಟ್ಟೆ: ಲಕ್ಷ್ಮಣ್ ಸವದಿ ಆರೋಪ

ABOUT THE AUTHOR

...view details