ತುಮಕೂರು: ಇಬ್ಬರು ಗರ್ಭಿಣಿಯರು ಹಾಗೂ 60 ವರ್ಷ ಮೇಲ್ಪಟ್ಟ 30 ಮಂದಿ ಸೇರಿದಂತೆ 127 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 4,105ಕ್ಕೆ ಏರಿಕೆಯಾಗಿದೆ.
ಅಲ್ಲದೇ 5 ಮಂದಿ ಸೋಂಕಿಗೆ ತುತ್ತಾಗಿ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 129ಕ್ಕೆ ಏರಿಕೆಯಾಗಿದೆ.
ತುಮಕೂರು ತಾಲೂಕಿನಲ್ಲಿ 35, ಮಧುಗಿರಿ 28, ಚಿಕ್ಕನಾಯಕನಹಳ್ಳಿ 15, ತಿಪಟೂರು ಮತ್ತು ಕುಣಿಗಲ್ ತಾಲೂಕಿನಲ್ಲಿ ತಲಾ 6, ಶಿರಾ 4, ಕೊರಟಗೆರೆ 3, ತುರುವೇಕೆರೆ ತಾಲೂಕಿನಲ್ಲಿ ಓರ್ವ ವ್ಯಕ್ತಿಗೆ ಸೋಂಕು ತಗುಲಿರುವುದು ವರದಿಯಾಗಿದೆ.
ಇನ್ನೂ 101 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಮೂರು ಸಾವಿರದ ನಾಲ್ಕು ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ.