ತುಮಕೂರು: ಜಿಲ್ಲೆಯಲ್ಲಿ ಇಂದು 132 ಮಂದಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 1346ಕ್ಕೆ ಏರಿಕೆಯಾಗಿದೆ.
ತುಮಕೂರು; 132 ಮಂದಿಗೆ ಸೋಂಕು ದೃಢ.. ಸೋಂಕಿತರ ಸಂಖ್ಯೆ 1346ಕ್ಕೆ ಏರಿಕೆ - Tumkur Corona News
ತುಮಕೂರು ಜಿಲ್ಲೆಯಲ್ಲಿ ಇಂದು 132 ಮಂದಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 1346ಕ್ಕೆ ಏರಿಕೆಯಾಗಿದೆ. ಜೊತೆಗೆ ಜಿಲ್ಲೆಯಲ್ಲಿ ಓರ್ವ ಮಹಿಳೆ ಕೊರೊನಾದಿಂದಾಗಿ ಮೃತಪಟ್ಟಿದ್ದು, ಮೃತರ ಸಂಖ್ಯೆ 63ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ತುಮಕೂರು ತಾಲ್ಲೂಕಿನಲ್ಲೇ 56 ಮಂದಿಗೆ, ಕುಣಿಗಲ್ ತಾಲೂಕಿನಲ್ಲಿ 22 ಮಂದಿಗೆ, ತುರುವೇಕೆರೆ ತಾಲೂಕಿನಲ್ಲಿ 13 ಮಂದಿಗೆ ಸೋಂಕು ತಗುಲಿದೆ. ಚಿಕ್ಕನಾಯಕನಹಳ್ಳಿ ಹಾಗೂ ಕೊರಟಗೆರೆ ತಾಲೂಕಿನಲ್ಲಿ ತಲಾ ನಾಲ್ವರಿಗೆ, ಗುಬ್ಬಿ ತಾಲ್ಲೂಕಿನಲ್ಲಿ ಆರು ಮಂದಿಗೆ, ಮಧುಗಿರಿ ತಾಲ್ಲೂಕಿನಲ್ಲಿ 8 ಮಂದಿಗೆ, ಪಾವಗಡ ಮತ್ತು ಶಿರಾ ತಾಲೂಕಿನಲ್ಲಿ ತಲಾ 5 ಮಂದಿಗೆ, ತಿಪಟೂರು ತಾಲೂಕಿನಲ್ಲಿ 9 ಮಂದಿಯಲ್ಲಿ ಸೋಂಕು ದೃಢವಾಗಿದೆ.
636 ಮಂದಿ ಈಗಾಗಲೇ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 667 ಮಂದಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಜಿಲ್ಲೆಯಲ್ಲಿ ಓರ್ವ ಮಹಿಳೆ ಕೊರೊನಾದಿಂದಾಗಿ ಮೃತಪಟ್ಟಿದ್ದು, ಮೃತರ ಸಂಖ್ಯೆ 63ಕ್ಕೆ ಏರಿಕೆಯಾಗಿದೆ.