ತುಮಕೂರು: ಕೊರೊನಾ ಸೋಂಕು ತಡೆಗೆ ಜಿಲ್ಲೆಯಾದ್ಯಂತ ಮೇ 17ರವರೆಗೆ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮುಂದಿನ 2 ವಾರಗಳವರೆಗೆ ಕೆಲವು ನಿರ್ಬಂಧಗಳ ಮೇಲೆ ಲಾಕ್ಡೌನ್ ಮುಂದುವರೆಸಲಾಗುವುದು ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಹೇಳಿದ್ದಾರೆ.
ಮೇ 17ರವರೆಗೆ ತುಮಕೂರು ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ - ಕೊರೊನಾ ಸೋಂಕು ತಡೆ
ತುಮಕೂರಿನಲ್ಲಿ ಕೊರೊನಾ ಸೋಂಕು ತಡೆಗೆ ಮೇ 17ರವರೆಗೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ತಿಳಿಸಿದ್ದಾರೆ.
ಮೇ 17ರವರೆಗೆ ತುಮಕೂರು ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ನಿಷೇಧಾಜ್ಞೆ ಹೊರಡಿಸಲಾಗಿದೆ. ಈ ಅವಧಿಯಲ್ಲಿ ರಾತ್ರಿ 7ರಿಂದ ಬೆಳಗ್ಗೆ 7 ಗಂಟೆಯವರೆಗೆ ಸಾರ್ವಜನಿಕರ ಸಂಪೂರ್ಣ ಸಂಚಾರವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಸೋಂಕು ತಡೆಗೆ ಸಾರ್ವಜನಿಕರು ಜಿಲ್ಲಾಡಳಿತದ ನಿಯಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.