ತುಮಕೂರು: ಜಿಲ್ಲೆಗೆ ಇತ್ತೀಚೆಗೆ ಕೇರಳ ರಾಜ್ಯದಿಂದ ವ್ಯಾಸಂಗಕ್ಕೆ ಬಂದಿರುವ 15 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ತುಮಕೂರಲ್ಲಿ ಕೇರಳ ಮೂಲದ 15 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ - ವಾದಿರಾಜ್ ನರ್ಸಿಂಗ್ ಕಾಲೇಜ್
ಇತ್ತೀಚೆಗೆ ಕೇರಳ ರಾಜ್ಯದಿಂದ ವ್ಯಾಸಂಗಕ್ಕೆ ಬಂದಿದ್ದ ಎರಡು ಖಾಸಗಿ ಕಾಲೇಜುಗಳ 15 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ.
ನಗರದ ಸಿದ್ದಗಂಗಾ ಹಾಗೂ ವಾದಿರಾಜ್ ನರ್ಸಿಂಗ್ ಕಾಲೇಜಿನಲ್ಲಿರುವ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿದೆ. 15 ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲಾಗಿದ್ದು, ಅಲ್ಲದೆ ಅವರ ಗಂಟಲು ದ್ರವವನ್ನು ಪರೀಕ್ಷೆಗಾಗಿ ಬೆಂಗಳೂರಿನ ಲ್ಯಾಬ್ ಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ 18 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ವಯಸ್ಸಿನ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಕಡ್ಡಾಯ ಮಾಡಲಾಗಿದೆ. ವಿದ್ಯಾರ್ಥಿಗಳು ತರಗತಿಗಳಿಗೆ ಪ್ರವೇಶ ಪಡೆಯಲು ಕನಿಷ್ಠ ಒಂದು ಡೋಸ್ ವ್ಯಾಕ್ಸಿನ್ ತೆಗೆದುಕೊಳ್ಳಬೇಕು, ಇಲ್ಲದಿದ್ದರೆ ತರಗತಿಗೆ ಅವಕಾಶ ನಿರಾಕರಿಸಲಾಗುವುದು. ಈ ಬಗ್ಗೆ ಎಲ್ಲಾ ಕಾಲೇಜುಗಳಿಗೆ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.