ತುಮಕೂರು:ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ ಸೇತುವೆಯಿಂದ ಉರುಳಿ ಬಿದ್ದು 15 ಮಂದಿಗೆ ಗಾಯಗೊಂಡಿರುವ ಘಟನೆ ತುಮಕೂರು ತಾಲೂಕಿನ ದೇವರ ಹೊಸಹಳ್ಳಿ ಸೇತುವೆ ಬಳಿ ಬುಧವಾರ ಸಂಭವಿಸಿದೆ.
ತುಮಕೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ ಮಳೆ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಅವಘಡ ಸಂಭವಿಸಿದೆ ಎನ್ನಲಾಗಿದೆ. ಬಸ್ ಸೇತುವೆ ಮೇಲಿಂದ ಉರುಳಿ ಬಿದ್ದ ಪರಿಣಾಮ ಸುಮಾರು 15 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.