ತುಮಕೂರು: ಜಿಲ್ಲೆಯಲ್ಲಿ ಇಂದು ಮಹಾಮಾರಿ ಸೋಂಕಿಗೆ ಮೂವರು ಕೊನೆಯುಸಿರೆಳೆದಿದ್ದಾರೆ ಮತ್ತು 153 ಕೋವಿಡ್ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 3003ಕ್ಕೆ ಹಾಗು ಮೃತರ ಸಂಖ್ಯೆ 89ಕ್ಕೆ ಏರಿಕೆಯಾಗಿದೆ.
ತುಮಕೂರು; 153 ಮಂದಿಗೆ ಸೋಂಕು ದೃಢ...3 ಬಲಿ! - ತುಮಕೂರು ಲೆಟೆಸ್ಟ್ ನ್ಯೂಸ್
ಜಿಲ್ಲೆಯಲ್ಲಿಂದು 153 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಮೂವರು ಸಾವನ್ನಪ್ಪಿದ್ದಾರೆ. ಜೊತೆಗೆ 93 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ತುಮಕೂರು ತಾಲೂಕಿನಲ್ಲಿ 35, ಪಾವಗಡ ತಾಲೂಕಿನಲ್ಲಿ 23, ತಿಪಟೂರು ತಾಲೂಕಿನಲ್ಲಿ 18, ಗುಬ್ಬಿ ಮತ್ತು ಕೊರಟಗೆರೆ ತಾಲೂಕಿನಲ್ಲಿ ತಲಾ 16, ಶಿರಾ ತಾಲೂಕಿನಲ್ಲಿ 15, ಕುಣಿಗಲ್ ತಾಲೂಕಿನಲ್ಲಿ 14, ತುರುವೇಕೆರೆ ತಾಲೂಕಿನಲ್ಲಿ 10, ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಸೋಂಕು ಪ್ರಕರಣಗಳು ಪತ್ತೆಯಾಗಿದೆ.
ಇಂದು ಒಂದೇ ದಿನ 93 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಒಟ್ಟು 1883 ಮಂದಿ ಸೋಂಕಿನಿಂದ ಗುಣಮುಖರಾಗಿರುತ್ತಾರೆ. ಸದ್ಯ 1031 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದ್ದು 18 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.