ತುಮಕೂರು:ಬರುವ ಏಪ್ರಿಲ್ 1ರಂದು ಸಿದ್ದಗಂಗಾ ಮಠದಲ್ಲಿ ನಡೆಯಲಿರುವ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ದೊಡ್ಡ ಪ್ರಮಾಣದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಸುಮಾರು 2ಲಕ್ಷ ಮಂದಿ ಸೇರಬಹುದೆಂಬ ನಿರೀಕ್ಷೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವ ಕುರಿತಂತೆ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು.