ತುಮಕೂರು: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್ ವತಿಯಿಂದ ಇದೇ ತಿಂಗಳ 23 ಮತ್ತು 24ರಂದು ಬೆಂಗಳೂರು ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಎಯುಟಿಯುಸಿ ರಾಜ್ಯ ಕಾರ್ಯದರ್ಶಿ ಎನ್. ಶಿವಣ್ಣ ತಿಳಿಸಿದರು.
ಅಂಗನವಾಡಿ ಕಾರ್ಯಕರ್ತೆಯರಿಂದ ಜ. 23,24ರಂದು ಬೆಂಗಳೂರು ಚಲೋಗೆ ಕರೆ..
ನಿವೃತ್ತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆಯರಿಗೆ ಪಿಂಚಣಿ ಸೌಲಭ್ಯವನ್ನು ಒದಗಿಸಬೇಕು. ಸೇವಾ ಹಿರಿತನದ ಆಧಾರದ ಮೇಲೆ ಸಂಬಳ ನೀಡಬೇಕು. ಪ್ರಮುಖವಾಗಿ ವೈದ್ಯಕೀಯ ಸೌಲಭ್ಯ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಹೋರಾತ್ರಿ ಧರಣಿ ಮತ್ತು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿಗಳನ್ನು ಶಾಲಾ ಪೂರ್ವಕ ಶಿಕ್ಷಣವನ್ನಾಗಿ ಪ್ರಾರಂಭಿಸುವುದರಿಂದ ಅಂಗನವಾಡಿ ಕೇಂದ್ರಗಳನ್ನು ಮುಚ್ಚುವಂತಹ ಪರಿಸ್ಥಿತಿ ಉಂಟಾಗಿದೆ. ಹಾಗಾಗಿ ಅಂಗನವಾಡಿಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿಗಳನ್ನು ಪ್ರಾರಂಭ ಮಾಡುವ ಮೂಲಕ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿಯ ಜೊತೆಗೆ ಪಠ್ಯಪುಸ್ತಕಗಳು ಹಾಗೂ ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.