ತುಮಕೂರು:ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿಂದು 280 ಮಂದಿಗೆ ಸೋಂಕು ತಗಲಿದ್ದು, ಸೋಂಕಿತರ ಸಂಖ್ಯೆ ಇದೀಗ 5,297ಕ್ಕೆ ಏರಿಕೆಯಾಗಿದೆ. ಇನ್ನು ಇಂದು 111 ಮಂದಿ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.
ಇದುವರೆಗೂ 3,737 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1,403 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು ಕೋವಿಡ್-19 ಸೋಂಕಿಗೆ ಇಬ್ಬರು ಮೃತಪಟ್ಟಿದ್ದು, ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 157ಕ್ಕೆ ಏರಿಕೆಯಾಗಿದೆ.
ತುಮಕೂರು ತಾಲ್ಲೂಕಿನಲ್ಲಿ 125 ಮಂದಿಗೆ ಸೋಂಕು ತಗುಲಿದ್ದು, ಪಾವಗಡ ತಾಲೂಕಿನಲ್ಲಿ 40, ಕುಣಿಗಲ್ ತಾಲೂಕಿನಲ್ಲಿ 22, ಶಿರಾ ಮತ್ತು ತಿಪಟೂರು ತಾಲೂಕಿನಲ್ಲಿ ತಲಾ 18, ಕೊರಟಗೆರೆ ಮತ್ತು ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ತಲಾ 16, ತುರುವೇಕೆರೆ ತಾಲೂಕಿನಲ್ಲಿ 12, ಮಧುಗಿರಿ ತಾಲ್ಲೂಕಿನಲ್ಲಿ 8, ಗುಬ್ಬಿ ತಾಲ್ಲೂಕಿನಲ್ಲಿ ಐವರಿಗೆ ಸೋಂಕು ತಗುಲಿದೆ.
ತುಮಕೂರು ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ 19 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೊಂದೆಡೆ ಜಿಲ್ಲೆಯ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ 33 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ 52 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.