ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ಬೆಳಗೀಹಳ್ಳಿ ಸಮೀಪ ಟ್ರ್ಯಾಕ್ಟರ್ ಪಲ್ಟಿಯಾಗಿ ಪುಟ್ಟ ಮಗು ಮೃತಪಟ್ಟಿದೆ.
ತುಮಕೂರು: ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸಾವು, ಐವರಿಗೆ ಗಾಯ
ಚಾಲಕನ ನಿಯಂತ್ರಣ ತಪ್ಪಿದ್ದ ಟ್ರ್ಯಾಕ್ಟರ್ ಪಲ್ಟಿ ಹೊಡೆದಿದೆ. ಪರಿಣಾಮ 4 ವರ್ಷದ ಮಗು ಮೃತಪಟ್ಟಿದೆ. ಐವರು ಗಾಯಗೊಂಡಿದ್ದಾರೆ.
ತುಮಕೂರು
ಕಮಲಾಪುರ ಗ್ರಾಮದ ಶ್ರೇಯಸ್ (4) ಸಾವನ್ನಪ್ಪಿದೆ. ಚಾಲಕನ ನಿಯಂತ್ರಣ ತಪ್ಪಿದ್ದ ಟ್ರ್ಯಾಕ್ಟರ್ ಪಲ್ಟಿ ಹೊಡೆದಿದೆ. ಈ ಟ್ರ್ಯಾಕ್ಟರ್ನಲ್ಲಿ ಸುಮಾರು 15 ಜನ ಪ್ರಯಾಣಿಸುತ್ತಿದ್ದರು. ಇವರಲ್ಲಿ ಐವರಿಗೆ ಗಾಯಗಳಾಗಿದ್ದು, ಹುಳಿಯಾರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರೆಲ್ಲರೂ ಟ್ರ್ಯಾಕ್ಟರ್ನಲ್ಲಿ ಬೆಳಗುಲಿ ರಂಗನಾಥಸ್ವಾಮಿ ದೇವಸ್ಥಾನಕ್ಕೆ ತೆರಳುತ್ತಿದ್ದರು. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಬಂದ ಹಂದನಕೆರೆ ಠಾಣಾ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.