ತುಮಕೂರು: ನಗರದ ಅಶ್ವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತರಿಗೆ ಆಕ್ಸಿನ್ ಕೊರತೆ ಹಿನ್ನೆಲೆ ಉಂಟಾಗಿದ್ದ ಗೊಂದಲಕ್ಕೆ ತೆರೆ ಎಳೆಯಲಾಗಿದೆ.
ತುಮಕೂರು: ಅಶ್ವಿನಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ನಿವಾರಣೆ
ಅಶ್ವಿನಿ ಆಸ್ಪತ್ರೆಯಲ್ಲಿ ಆಕ್ಸಿನ್ ಕೊರತೆ ಹಿನ್ನೆಲೆ 40 ಜಂಬೋ ಆಕ್ಸಿಜನ್ ಸಿಲಿಂಡರ್ಗಳನ್ನು ಸರಬರಾಜು ಮಾಡಲಾಗಿದೆ.
40 ಜಂಬೋ ಆಕ್ಸಿಜನ್ ಸಿಲಿಂಡರ್ ಸರಬರಾಜು ಮಾಡಲಾಗಿದೆ. ಅಸ್ಪತ್ರೆಯಲ್ಲಿ 60 ಜನ ಕೋವಿಡ್ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು 9 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 40 ಮಂದಿ ಆಕ್ಸಿಜನ್ ಚಿಕಿತ್ಸೆ ಪಡೆಯುತ್ತಿದ್ದು, ಉಳಿದ 11 ಜನ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಸ್ಪತ್ರೆಗೆ ಪ್ರತಿದಿನ ನೀಡುತ್ತಿದ್ದ ಆಕ್ಸಿಜನ್ ಕಂಪನಿಯು ತಡ ಮಾಡಿದ್ದರಿಂದ ಸಮಸ್ಯೆ ಉಂಟಾಗಿತ್ತು. ಇದರಿಂದ ಕೋವಿಡ್ ಸೋಂಕಿತರ ಸಂಬಂಧಿಕರು ಆತಂಕಕ್ಕೆ ಒಳಗಾಗಿದ್ದರು. ಸ್ಥಳಕ್ಕೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಪರಿಸ್ಥಿತಿ ಮಾಹಿತಿ ಪಡೆದು ಆಕ್ಸಿಜನ್ ಸಿಲಿಂಡರ್ಗಳನ್ನು ಕೂಡಲೇ ತಂದು ಕೊಡುವಂತೆ ಆದೇಶಿಸಿದ್ರು. ನಂತರ ಸುಮಾರು 40 ಆಕ್ಸಿಜನ್ ಸಿಲಿಂಡರ್ಗಳನ್ನು ಆಸ್ಪತ್ರೆಗೆ ಸರಬರಾಜು ಮಾಡಲಾಯಿತು.