ತುಮಕೂರು:ಕೊರೊನಾದಿಂದ ರಾಜ್ಯದಲ್ಲಿ 43 ಮಕ್ಕಳು ತಂದೆ-ತಾಯಿ ಇಬ್ಬರನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಮುಖ್ಯಮಂತ್ರಿಗಳ ಬಾಲಸೇವಾ ಯೋಜನೆಯಡಿ ಇಂತಹ ಮಕ್ಕಳಿಗೆ ಪ್ರತಿ ತಿಂಗಳು 3,500 ಸಾವಿರ ರೂ. ಗಳನ್ನು ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ರಾಜ್ಯದಲ್ಲಿ ಕೊರೊನಾದಿಂದಾಗಿ ತಂದೆ-ತಾಯಿಯನ್ನು ಕಳೆದುಕೊಂಡ 43 ಮಕ್ಕಳು ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅನಾಥ ಹೆಣ್ಣುಮಕ್ಕಳ ಭವಿಷ್ಯದ ದೃಷ್ಠಿಯಿಂದ 23 ವರ್ಷ ತುಂಬಿದ ಬಳಿಕ 1 ಲಕ್ಷ ರೂ.ನೀಡಲಾಗುವುದು. ಕೋವಿಡ್ ಮೂರನೇ ಅಲೆ ಮಕ್ಕಳಿಗೆ ಹಬ್ಬುವ ಸಾಧ್ಯತೆಯಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಗಳಲ್ಲಿ ಸಿದ್ಧತೆ ಮಾಡಿಕೊಳ್ಳುವ ಬಗ್ಗೆ ಸಭೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಸರ್ಕಾರ ರೂಪಿಸಿರುವ ಈ ಯೋಜನಾ ಸೌಲಭ್ಯಗಳನ್ನು ಅಧಿಕಾರಿಗಳು ಸೂಕ್ತ ರೀತಿಯಲ್ಲಿ ತಲುಪಿಸಿ ಅವರಿಗೆ ನೆರವಾಗಬೇಕು. ಜಿಲ್ಲಾಡಳಿತದಿಂದ ಸಕಲ ರೀತಿಯಲ್ಲಿಯೂ ಮೂರನೇ ಅಲೆ ಎದುರಿಸಲು ಸಜ್ಜು ಮಾಡಿಕೊಳ್ಳಲಾಗಿದೆ. ಅಪೌಷ್ಟಿಕತೆಯುಳ್ಳ ಮುಕ್ಕಳಿಗೆ ಸೂಕ್ಷ್ಮ ಪೋಷಕಾಂಶವುಳ್ಳ ವಿಶೇಷ ಆಹಾರ ಕಿಟ್ ನೀಡುವ ಕಾರ್ಯಕ್ಕೆ ಮುಂದಾಗಿರುವ ಕ್ರಮ ಶ್ಲಾಘನೀಯವಾಗಿದೆ ಎಂದರು.
ಅದೇ ರೀತಿ ಪೋಷಕರಿಗೆ ಹೆಚ್ಚು ಅರಿವು ಮೂಡಿಸಲು ಕ್ರಮ ವಹಿಸಲಾಗಿದೆ. ಮಕ್ಕಳನ್ನು ಮತ್ತು ತಾಯಿಯ ಜೊತೆಗೆ ಆರೈಕೆ ಮಾಡಲು ಜಿಲ್ಲಾಡಳಿತ ಕೋವಿಡ್ ಕೇರ್ ಸೆಂಟರ್ಗಳನ್ನು ಗುರುತಿಸಿ ಸಜ್ಜುಗೊಳಿಸಿದೆ. ತುಮಕೂರು ಜಿಲ್ಲೆಯಲ್ಲಿ ಕೊರೊನಾದಿಂದಾಗಿ ಒಬ್ಬ ಪಾಲಕರನ್ನು ಕಳೆದುಕೊಂಡು ಸುಮಾರು 56 ಮಕ್ಕಳಿದ್ದಾರೆ. ಅವರೆಲ್ಲರನ್ನೂ ಸಹ ಸರ್ಕಾರದ ಯೋಜನೆಗೆ ಒಳಪಡಿಸಿದ್ದೇವೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಮಾಹಿತಿ ನೀಡಿದರು.