ಕರ್ನಾಟಕ

karnataka

ETV Bharat / state

ತುಮಕೂರು: ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಡೇಂಜರಸ್​ ಚಿರತೆ - ಚಿರತೆ ದಾಳಿ

ಸುಮಾರು 5 ವರ್ಷದ ಗಂಡು ಚಿರತೆ ಇದಾಗಿದ್ದು, ಸಾಕು ಪ್ರಾಣಿಗಳನ್ನು ತಿಂದುಹಾಕಿತ್ತು. ಗ್ರಾಮಸ್ಥರ ಒತ್ತಾಯದ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲು ಬೋನನ್ನು ಇರಿಸಿದ್ದರು.

leopard captured
ಚಿರತೆ ಸೆರೆ

By

Published : Jan 16, 2021, 5:28 PM IST

ತುಮಕೂರು:ಜಿಲ್ಲೆಯ ತಿಪಟೂರು ತಾಲೂಕು ಹಿಂಡಿಸ್ಕೆರೆ ಗ್ರಾಮದ ಸುತ್ತಮುತ್ತ ಹಲವು ದಿನಗಳಿಂದ ಜನ - ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.

ಸುಮಾರು 5 ವರ್ಷದ ಗಂಡು ಚಿರತೆ ಇದಾಗಿದ್ದು, ಸಾಕುಪ್ರಾಣಿಗಳನ್ನು ತಿಂದು ಹಾಕಿತ್ತು. ಗ್ರಾಮಸ್ಥರ ಒತ್ತಾಯದ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಸೆರೆ ಹಿಡಿಯಲು ಬೋನನ್ನು ಇರಿಸಿದ್ದರು.

ಇದೀಗ ಬೋನಿಗೆ ಬಿದ್ದಿರುವ ಚಿರತೆಯನ್ನು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಲಾಗುವುದು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ತಿಳಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರಿನ ಶಾಲಾ ಆವರಣದಲ್ಲಿ ಸುಳಿದಾಡುತ್ತಿದ್ದ​ ಕಾಳಿಂಗಸೆರೆ

ABOUT THE AUTHOR

...view details