ಕರ್ನಾಟಕ

karnataka

ETV Bharat / state

ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ : ಜಿಲ್ಲಾಸ್ಪತ್ರೆಯಲ್ಲಿ ಗಾಯಾಳುವಿಗೆ ಚಿಕಿತ್ಸೆ - ತುಮಕೂರಿನಲ್ಲಿ ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ

ಗಂಭೀರವಾಗಿ ಗಾಯಗೊಂಡಿದ್ದ ಬೈರಪ್ಪ ಅವರನ್ನು ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ..

ವ್ಯಕ್ತಿ ಮೇಲೆ ಕರಡಿ ದಾಳಿ
ವ್ಯಕ್ತಿ ಮೇಲೆ ಕರಡಿ ದಾಳಿ

By

Published : Sep 10, 2021, 4:58 PM IST

ತುಮಕೂರು : ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ ನಡೆಸಿದ ಹಿನ್ನೆಲೆ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರೋ ಘಟನೆ ಪಾವಗಡ ತಾಲೂಕಿನ ಕಡಮಲಕುಂಟೆ ಗ್ರಾಮದಲ್ಲಿ ನಡೆದಿದೆ. ಬೈರಪ್ಪ (36) ಎಂಬುವರು ಗಾಯಗೊಂಡ ವ್ಯಕ್ತಿಯಾಗಿದ್ದಾರೆ.

ಗಿಡಗಳ ಮಧ್ಯೆ ಅಡಗಿ ಕುಳಿತಿದ್ದ ಕರಡಿ ಬಹಿರ್ದೆಸೆಗೆ ಹೋಗುತ್ತಿದ್ದ ಬೈರಪ್ಪನ ಮೇಲೆ ದಾಳಿ ನಡೆಸಿದೆ. ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿವೆ. ಕರಡಿ ದಾಳಿಯಿಂದ ತಪ್ಪಿಸಿಕೊಳ್ಳಲು ಬೈರಪ್ಪ ಕಿರುಚಾಡಿದ್ದಾರೆ. ನಂತರ ಸುತ್ತಮುತ್ತಲಿದ್ದ ಜನ ಸ್ಥಳಕ್ಕಾಗಮಿಸುತ್ತಿದ್ದಂತೆ, ಜನರನ್ನು ಕಂಡು ಕರಡಿ ಸ್ಥಳದಿಂದ ಓಡಿ ಹೋಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಬೈರಪ್ಪ ಅವರನ್ನು ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಅಧಿಕಾರಿ ಬಸವರಾಜ್ ಪರಿಶೀಲನೆ ನಡೆಸಿ, ನಂತರ ಚಿಕಿತ್ಸೆ ಪಡೆಯುತ್ತಿರುವ ಬೈರಪ್ಪ ಅವರನ್ನು ಭೇಟಿ ಮಾಡಿ ಇಲಾಖೆ ವತಿಯಿಂದ ನೀಡಲಾಗುವ ಪರಿಹಾರದ ಭರವಸೆ ನೀಡಿದರು.

ಇದನ್ನೂ ಓದಿ : ದ.ಕನ್ನಡ ಜಿಲ್ಲೆಯಲ್ಲಿ 2020-21ರಲ್ಲಿ ಶಾಲೆ ತೊರೆದ 18 ವರ್ಷದೊಳಗಿನ 567 ವಿದ್ಯಾರ್ಥಿಗಳು

ABOUT THE AUTHOR

...view details