ತುಮಕೂರು: ಹೊಲಕ್ಕೆ ನಡೆದುಕೊಂಡು ಹೋಗುತ್ತಿದ್ದ ರೈತನ ಮೇಲೆ ಏಕಾಏಕಿ ಕರಡಿ ದಾಳಿ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ದಾಸೇನಹಳ್ಳಿಯಲ್ಲಿ ನಡೆದಿದೆ. ನಾಗರಾಜಪ್ಪ (54) ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಮೈಸೂರು: ಕಾರಿನ ಮೇಲೆ ದಾಳಿ ಮಾಡಲು ಬಂದು ಪೋಸ್ ಕೊಟ್ಟ ಕರಡಿ
ಕುರಿ, ಮೇಕೆಗಳಿಗೆ ಮೇವು ತರಲು ರೈತ ಹೊಲಕ್ಕೆ ಹೋಗುತ್ತಿದ್ದ ವೇಳೆ ಕರಡಿ ದಾಳಿ ಮಾಡಿದೆ. ಕೂಡಲೇ ನಾಗರಾಜಪ್ಪ ಕೂಗಾಡಿದ್ದು, ಅವರ ಚಿರಾಟ ಕೇಳಿಸಿಕೊಂಡು ಸ್ಥಳಕ್ಕೆ ಸ್ಥಳೀಯರು ಆಗಮಿಸುತ್ತಿದ್ದಂತೆ ಕರಡಿ ಪರಾರಿಯಾಗಿದೆ. ಬಳಿಕ ಗ್ರಾಮಸ್ಥರು ಗಾಯಾಳುವನ್ನು ಚಿಕಿತ್ಸೆಗಾಗಿ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ತುಮಕೂರು ಜಿಲ್ಲೆಯಲ್ಲಿ ಆಗಾಗ ಕರಡಿ ದಾಳಿಯ ವರದಿಗಳು ಆಗುತ್ತಲೇ ಇವೆ. 2021ರಲ್ಲಿ ಕೂಡಾ ಬಹಿರ್ದೆಸೆಗೆ ತೆರಳಿದ ವ್ಯಕ್ತಿ ಮೇಲೆ ಕರಡಿ ದಾಳಿ ಮಾಡಿತ್ತು. ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ : ಜಿಲ್ಲಾಸ್ಪತ್ರೆಯಲ್ಲಿ ಗಾಯಾಳುವಿಗೆ ಚಿಕಿತ್ಸೆ ನೀಡಲಾಗಿತ್ತು.
ಇದನ್ನೂ ಓದಿ:ಗಂಗಾವತಿಯಲ್ಲಿ ಕರಡಿ ದಾಳಿಯಿಂದ ಹಲವರಿಗೆ ಗಾಯ: ಆಸ್ಪತ್ರೆಗೆ ಶಾಸಕ ಪರಣ್ಣ ಭೇಟಿ