ತುಮಕೂರು:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಬದಿಯ ಹಳ್ಳಕ್ಕೆ ತಲೆಕೆಳಗಾಗಿ ಬಿದ್ದ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರು ಬಳಿ ನಡೆದಿದೆ.
ಪಲ್ಟಿಯಾದ ಕಾರು ನೋಡಿದ್ರೆ ಪ್ರಯಾಣಿಕರು ಬದುಕಿರಲು ಸಾಧ್ಯವೇ.. ಆದರೆ, ಪವಾಡ ನಡೀತು.. - Nittur of Gubbi Taluk, Tumkur District
ಎದುರಿಗೆ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆಯೋದನ್ನ ತಪ್ಪಿಸಲು ಹೋಗಿ ಪಲ್ಟಿಯಾದ ಕಾರು. ಆದರೆ, ದೇವರು ದೊಡ್ಡವನು..
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು..ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು.. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು..
ಎದುರುಗಡೆಯಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆಯುವುದನ್ನ ತಪ್ಪಿಸಲು ಹೋಗಿ ಕಾರನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳಲಾಗದೆ ಈ ಅವಘಡ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.