ತುಮಕೂರು: ಕೇಂದ್ರ ಸರ್ಕಾರದ ರೈತ ಮಸೂದೆಗಳ ವಿರುದ್ಧ ಹೋರಾಟ ನಡೆಸುತ್ತಿರುವ ಪ್ರತಿಭಟನಾಕಾರರು ಭಯೋತ್ಪಾದಕರು ಎಂದು ಬಾಲಿವುಡ್ ನಟಿ ಕಂಗನಾ ರನೌತ್ ಟ್ವೀಟ್ ಮಾಡಿದ್ದು, ಇದರ ವಿರುದ್ಧವಾಗಿ ತುಮಕೂರಿನ ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಕೀಲರೊಬ್ಬರು ಪ್ರಕರಣ ದಾಖಲಿಸಿದ್ದಾರೆ.
ಬಾಲಿವುಡ್ ನಟಿ ಕಂಗನಾ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು
ಕೇಂದ್ರ ಸರ್ಕಾರದ ರೈತ ಮಸೂದೆಗಳ ವಿರುದ್ಧ ಹೋರಾಟ ನಡೆಸುತ್ತಿರುವ ಪ್ರತಿಭಟನಾಕಾರರ ಬಗ್ಗೆ ಬಾಲಿವುಡ್ ನಟಿ ಕಂಗನಾ ರನೌತ್ ಟ್ವೀಟ್ ಮಾಡಿದ್ದು, ನಟಿ ವಿರುದ್ಧ ತುಮಕೂರಿನ ನ್ಯಾಯಾಲಯವೊಂದರಲ್ಲಿ ವಕೀಲರೊಬ್ಬರು ಖಾಸಗಿ ದೂರು ದಾಖಲಿಸಿದ್ದಾರೆ.
ಕಂಗನಾ ರಣಾವತ್
ವಕೀಲರಾದ ರಮೇಶ್ ನಾಯಕ್, ಕಂಗನಾ ರನೌತ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಈ ಮೊದಲು ಇ-ಮೇಲ್ ಮೂಲಕ ಡಿಐಜಿಗೆ ದೂರು ನೀಡಿದ್ದರು. ಆದರೆ ಯಾವುದೇ ರೀತಿಯ ದೂರು ದಾಖಲಿಸಿಕೊಳ್ಳದ ಹಿನ್ನೆಲೆ ಇದೀಗ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದಾರೆ.
Last Updated : Sep 26, 2020, 1:31 PM IST