ತುಮಕೂರು: ಪಾವಗಡ ಪಟ್ಟಣದ ಎಂಎಜಿ ಪೆಟ್ರೋಲ್ ಬಂಕ್ ಬಳಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಸವಾರ ಸಾವು - ತುಮಕೂರು ಅಪಘಾತ ಸುದ್ದಿ
ಪಾವಗಡ ಪಟ್ಟಣದ ಎಂಎಜಿ ಪೆಟ್ರೋಲ್ ಬಂಕ್ ಬಳಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
![ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಸವಾರ ಸಾವು](https://etvbharatimages.akamaized.net/etvbharat/prod-images/768-512-4808940-thumbnail-3x2-vid.jpg)
ಬೈಕ್ ಸವಾರ
ಪಟ್ಟಣದ ತುಮಕೂರು ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಬುಧವಾರ ರಾತ್ರಿ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ರಾಜವಂತಿ ಗ್ರಾಮದ ನಾಗರಾಜು ಎಂಬುವರು ಗಂಭೀರವಾಗಿ ಗಾಯಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ ನಾಗರಾಜು (25) ಸಾವನ್ನಪ್ಪಿದ್ದಾರೆ.
ಈ ಘಟನೆಯ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.