ಕರ್ನಾಟಕ

karnataka

ETV Bharat / state

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಮಹಿಳೆ ಸಜೀವ ದಹನ - ಈಟಿವಿ ಭಾರತ ಕನ್ನಡ

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮಹಿಳೆಯೊಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ.

Kn_tmk_
ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ

By

Published : Nov 12, 2022, 10:53 PM IST

Updated : Nov 12, 2022, 11:00 PM IST

ತುಮಕೂರು:ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಸಜೀವ ದಹನವಾಗಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಎಲೆ ರಾಮಪುರ ಗ್ರಾಮದ ಬಳಿ ನಡೆದಿದೆ.

ಬೆಂಗಳೂರಿನಿಂದ ಮಧುಗಿರಿ ಕಡೆಗೆ ಬರುತ್ತಿದ್ದ ಮಹೇಂದ್ರ ಕಾರು ಹಾಗೂ ಮಧುಗಿರಿಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಎಟಿಯೋಸ್ ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇಟಿಯೋಸ್ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ಮಹಿಳೆ ಸಜೀವ ದಹನವಾಗಿದ್ದಾರೆ. ಇನ್ನು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇಬ್ಬರು ವ್ಯಕ್ತಿಗಳನ್ನು ಚಿಕಿತ್ಸೆಗಾಗಿ ಕೊರಟಗೆರೆ ಹಾಗೂ ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ

ಇದನ್ನೂ ಓದಿ:ಓವರ್ ಟೇಕ್ ಭರದಲ್ಲಿ ಬಸ್​​ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಸಾವು

Last Updated : Nov 12, 2022, 11:00 PM IST

ABOUT THE AUTHOR

...view details