ತುಮಕೂರು: ಪ್ರಿಯಕರನೊಬ್ಬ ತನ್ನ ಪ್ರೇಯಸಿಗೆ ವಿಷಕಾರಿ ವಸ್ತುವನ್ನು ತಿನ್ನಿಸಿ ಕೊಲೆ ಮಾಡಲು ಯತ್ನಿಸಿರುವ ಆರೋಪ ನಗರದಲ್ಲಿ ಕೇಳಿ ಬಂದಿದೆ.
ಕಾಜಲ್(ಹೆಸರು ಬದಲಿಸಲಾಗಿದೆ) ಎಂಬ ಯುವತಿ ವಿಷ ಸೇವಿಸಿದ್ದು, ಇದೀಗ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ. ತುಮಕೂರಿನ ಗಿರಿನಗರ ಬಡಾವಣೆಯ ಸೈಮಾನ್ ಎಂಬಾತ ಮೂರು ವರ್ಷಗಳಿಂದ ತಮ್ಮ ಮಗಳನ್ನು ಪ್ರೀತಿಸುತ್ತಿದ್ದ. ಇದಕ್ಕೆ ತೀವ್ರ ಪ್ರತಿರೋಧ ವ್ಯಕ್ತಪಡಿಸಿದ್ದರಿಂದ ಆತ ಹಲವಾರು ಬಾರಿ ಗಲಾಟೆ ಮಾಡುವುದು ಮತ್ತು ಹಲ್ಲೆ ಮಾಡುವುದನ್ನು ಮುಂದುವರೆಸಿದ್ದ ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ.