ತುಮಕೂರು: ದೆಹಲಿಯಲ್ಲಿ ಕೇಂದ್ರದ ರೈತ ವಿರೋಧಿ ಕಾಯ್ದೆಯನ್ನು ವಿರೋಧಿಸಿ, ರೈತರು ನಡೆಸುತ್ತಿರುವ ಪ್ರತಿಭಟನೆಗೆ ನಮ್ಮ ಬೆಂಬಲವಿದ್ದು, ನಮ್ಮ ಸರಕಾರದಿಂದ ರೈತರಿಗೆ ಬೇಕಾದಂತಹ ಎಲ್ಲ ರೀತಿಯ ಮೂಲ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಉಸ್ತುವಾರಿ ರೋಮಿ ಭಾಟಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆಮ್ ಆದ್ಮಿ ಪಾರ್ಟಿಯಿಂದ ರಾಜ್ಯಸಭೆಯಲ್ಲಿ ಮೂವರು ಮತ್ತು ಲೋಕಸಭೆಯಲ್ಲಿ ಒಬ್ಬರು ಚುನಾಯಿತ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರೈತ ವಿರೋಧಿ ಕಾಯ್ದೆಯನ್ನು ಎಲ್ಲ ಭಾಗದಿಂದಲೂ ನಾವು ವಿರೋಧಿಸುತ್ತಲೇ ಬಂದಿದ್ದೇವೆ ಎಂದರು.
ಇನ್ನು ದೆಹಲಿಯಲ್ಲಿ ಕೇಂದ್ರದ ರೈತ ವಿರೋಧಿ ಕಾಯ್ದೆಯನ್ನು ವಿರೋಧಿಸಿ, ರೈತರು ನಡೆಸುತ್ತಿರುವ ಪ್ರತಿಭಟನೆಗೆ ನಮ್ಮ ಬೆಂಬಲವಿದ್ದು, ನಮ್ಮ ಸರ್ಕಾರದಿಂದ ರೈತರಿಗೆ ಬೇಕಾದಂತಹ ಎಲ್ಲ ರೀತಿಯ ಮೂಲ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.
ಆಮ್ ಆದ್ಮಿ ಪಾರ್ಟಿ ಸುದ್ದಿಗೋಷ್ಠಿ ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆಯನ್ನು ವಿರೋಧಿಸಿ ಜನವರಿ 26ರಂದು ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ಅನೇಕ ರೈತರು ಕಾಣೆಯಾದರು, ಈ ಬಗ್ಗೆ ರೈತರು ದೆಹಲಿ ಸರ್ಕಾರಕ್ಕೆ ಕಾಣೆಯಾದವರನ್ನು ಹುಡುಕಿಕೊಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಕಾಣೆಯಾದವರನ್ನು ಪತ್ತೆಮಾಡುವ ಕಾರ್ಯ ಮಾಡಲಾಗುತ್ತದೆ ಎಂದು ತಿಳಿಸಿದರು.
ನಂತರ ಮಾತನಾಡಿದ ರಾಜ್ಯ ಉಪಾಧ್ಯಕ್ಷ ವಿಜಯ್ ಶರ್ಮ, ಕರ್ನಾಟಕ ರಾಜ್ಯದಲ್ಲಿ ಆಮ್ ಆದ್ಮಿ ಪಾರ್ಟಿಯನ್ನು ತಳಮಟ್ಟದಿಂದ ಬೆಳೆಸಲು ಸಿದ್ಧತೆ ನಡೆಯುತ್ತಿದ್ದು, ಮುಂದೆ ಬರುವಂತಹ ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದರು. ನಮ್ಮ ಪಕ್ಷ ಯಾವುದೇ ಜಾತಿ, ಧರ್ಮಕ್ಕೆ ಕಟ್ಟುಬಿದ್ದು ರಾಜಕೀಯ ಮಾಡುವುದಿಲ್ಲ. ಮನ್ ಕಿ ಬಾತ್ ರೀತಿ ನಾವು ಮಾತನಾಡುವುದಿಲ್ಲ, ಕಾಮ್ ಕಿ ಬಾತ್ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತೇವೆ ಎಂದರು.